ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಅಬ್ಬರ ಬಹುತೇಕ ಇಳಿಕೆ ಆಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಒಂದೇ ಒಂದು ಕೊರೊನಾ ಕೇಸ್ ಪತ್ತೆ ಆಗಿಲ್ಲ.
ಇಲ್ಲಿವರೆಗೂ ಒಟ್ಟು ಸೋಂಕಿತರ ಸಂಖ್ಯೆ 95607 ಆಗಿದೆ. ಇಂದು ಆಸ್ಪತ್ರೆಯಿಂದ ಒಬ್ಬರು ಡಿಸ್ಚಾರ್ಜ್ ಆಗಿದ್ದಾರೆ.ಈ ಮೂಲಕ ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 95061 ಏರಿಕೆ ಆಗಿದೆ.
ಇನ್ನು ಈವರೆಗೂ 546 ಜನ ಹೆಮ್ಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಸಕ್ರಿಯ ಪ್ರಕರಣಗಳೂ ಇಲ್ಲ.
Kshetra Samachara
27/04/2022 08:48 pm