ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಗೆ ವಾರದಲ್ಲಿ ಇಬ್ಬರು ಬಲಿ!

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಎರಡನೇ ಬಲಿ ಪಡೆದಿದೆ. ಮೊನ್ನೆ 98ರ ವೃದ್ಧರೊಬ್ಬರು ಕೋವಿಡ್‌ಗೆ ಬಲಿಯಾದರೆ ನಿನ್ನೆ ಉಡುಪಿಯ 90ವರ್ಷ ಪ್ರಾಯದ ಹಿರಿಯ ನಾಗರಿಕರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಟಿಬಿ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದ ಇವರನ್ನು ಗಂಭೀರ ಕೋವಿಡ್ ರೋಗ ಲಕ್ಷಣಗಳೊಂದಿಗೆ ಕಳೆದ ಆ.15ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟರು. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ಗೆ ಅಧಿಕೃತವಾಗಿ ಬಲಿಯಾದವರ ಸಂಖ್ಯೆ 549ಕ್ಕೇರಿದೆ. ಈ ವರ್ಷ ಕೋವಿಡ್‌ನಿಂದ ಮೃತಪಟ್ಟವರು 56 ಮಂದಿ.

ಬುಧವಾರ ಜಿಲ್ಲೆಯಲ್ಲಿ 11ಮಂದಿ ಕೋವಿಡ್‌ಗೆ ಪಾಸಿಟಿವ್ ಬಂದಿದ್ದು, 16 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 51 ಮಂದಿ ಈಗಲೂ ಚಿಕಿತ್ಸೆಯಲ್ಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

01/09/2022 08:58 am

Cinque Terre

3.28 K

Cinque Terre

1

ಸಂಬಂಧಿತ ಸುದ್ದಿ