ಕಾಪು: ಕೊರೊನಾ ಸೋಂಕಿಗೆ ಒಳಗಾಗಿ ಕ್ವಾರಂಟೈನ್‌ನಲ್ಲಿದ್ದ ವೃದ್ಧರೊಬ್ಬರು ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪುರದ ಮೂಡು ಕಲ್ಮಂಜೆ ಎಂಬಲ್ಲಿ ಅ.30ರಂದು ನಸುಕಿನ ವೇಳೆ ನಡೆದಿದೆ.
ಮೃತರನ್ನು ಮೂಡುಕಲ್ಮಂಜೆಯ ರಾಘು ಆರ್.ಬಂಗೇರ(79) ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಕೋವಿಡ್-19ಗೆ ತುತ್ತಾದ ಇವರು ಚಿಕಿತ್ಸೆಯ ಬಳಿಕ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದರು.
ಇದರಿಂದ ಬೇಸರ ಗೊಂಡ ಅವರು ಜೀವನದಲ್ಲಿ ಜುಗುಪ್ಸೆಗೊಂಡು ಮನೆಯ ಬದಿಯಲ್ಲಿರುವ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
01/11/2020 11:23 am