ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಾಸ್ಕ್ ಹಾಕದ ಸರ್ಕಾರಿ ಬಸ್ ಕಂಡಕ್ಟರ್‌ಗೆ ಜಿಲ್ಲಾಧಿಕಾರಿಯಿಂದ ದಂಡದ ಬಿಸಿ

ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯದ ಅವರಣದಲ್ಲಿ ಕೋವಿಡ್ ಜನಾಂದೋಲನ ಮಾಹಿತಿ ಕಾರ್ಯಕ್ರಮದ ನಂತರ, ಸಮೀಪದ ವಸತಿ ಸಂಕೀರ್ಣದ ಮನೆಗೆ “ನನ್ನ ಕುಟುಂಬ ನನ್ನ ಜವಾಬ್ದಾರಿ” ಅಭಿಯಾನ ಕಾರ್ಯಕ್ರಮದ ಸ್ಟಿಕ್ಕರ್ ಅಳವಡಿಸಿ ಹೊರ ಬಂದ ಜಿಲ್ಲಾಧಿಕಾರಿ ಜಿ.ಜಗದೀಶ್, ರಸ್ತೆ ದಾಟುವಾಗ ಮುಂದೆ ಹಾದು ಹೋದ ಸರ್ಕಾರಿ ಬಸ್‌ನಲ್ಲಿ ಬಸ್ ಮುಂದುಗಡೆ ಕುಳಿತಿದ್ದ ಕಂಡಕ್ಟರ್ ಮಾಸ್ಕ್ ಧರಿಸದೇ ಕುಳಿತಿರುವುದನ್ನು ಗಮನಿಸಿ, ಕೂಡಲೇ ಬಸ್ ನಿಲ್ಲಿಸುವಂತೆ ಸೂಚಿಸಿ, ಕಂಡಕ್ಟರ್‌ಗೆ ತಕ್ಷಣ ಸ್ಥಳದಲ್ಲೇ ದಂಡ ವಿಧಿಸುವಂತೆ ಸ್ಥಳದಲ್ಲಿದ್ದ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾಹನದಲ್ಲಿದ್ದ ಇತರ ಪ್ರಯಾಣಿಕರು ಮಾಸ್ಕ್ ಧರಿಸದಿರುವುದನ್ನೂ ಕಂಡ ಜಿಲ್ಲಾಧಿಕಾರಿ ಅವರಿಗೂ ದಂಡ ವಿಧಿಸುವಂತೆ ಸೂಚಿಸಿದರು. ಕಂಡಕ್ಟರ್ ಮಾಸ್ಕ್ ಧರಿಸದೇ ಇದ್ದುದಲ್ಲದೆ , ಬಸ್‌ನಲ್ಲಿದ್ದ ಪ್ರಯಾಣಿಕರಿಗೂ ಮಾಸ್ಕ್ ಧರಿಸಲು ಸೂಚಿಸದಿರುವುದನ್ನು ಕಂಡು ಜಿಲ್ಲಾಧಿಕಾರಿ ಅವರು ಕಂಡಕ್ಟರ್ ನನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

Edited By :
Kshetra Samachara

Kshetra Samachara

19/10/2020 12:28 pm

Cinque Terre

8.19 K

Cinque Terre

1

ಸಂಬಂಧಿತ ಸುದ್ದಿ