ಉಡುಪಿ: ದೀಪಾವಳಿ ಪ್ರಯುಕ್ತ ಜಿಲ್ಲೆಯಲ್ಲಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು ಹಾಗೂ ಸಾರ್ವಜನಿಕರು ಸರ್ಕಾರದ ಅದೇಶದಂತೆ ರಾತ್ರಿ 8 ರಿಂದ 10 ರ ವರೆಗೆ ಮಾತ್ರ ಪಟಾಕಿ ಸಿಡಿಸಬೇಕು, ನಿಗದಿತ ಅವಧಿಗಿಂತ ಮುಂಚೆ ಹಾಗೂ ನಿಗದಿತ ಅವಧಿ ನಂತರ ಪಟಾಕಿ ಸಿಡಿಸುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಸುರಕ್ಷಿತ ರೀತಿ ದೀಪಾವಳಿ ಆಚರಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾರ್ವಜನಿಕರು ನಿಗದಿತ ಅವಧಿಯಲ್ಲಿ ಮಾತ್ರ ಪಟಾಕಿ ಸಿಡಿಸಬೇಕು, ಈ ಕುರಿತು ಪರಿಶೀಲಿಸಲು ಬೀಟ್ ನಲ್ಲಿರುವ ಪೊಲೀಸ್ ಸಿಬ್ಬಂದಿ ಬಳಸಿಕೊಳ್ಳುವಂತೆ ಪೊಲೀಸ್ ಇಲಾಖೆಗೆ ಮತ್ತು ಎಲ್ಲಾ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಪಟಾಕಿ ಮಳಿಗೆಗಳಲ್ಲಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು, ನಿಷೇಧಿತ ಪಟಾಕಿ ಮಾರಾಟ ಮಾಡಿದ್ದಲ್ಲಿ ಅಂತಹ ಅಂಗಡಿಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
Kshetra Samachara
13/11/2020 02:56 pm