ಮಣಿಪಾಲ : ವಿಶ್ವ ವಿಶ್ರಾಂತಿ ಮತ್ತು ಪ್ರಶಾಮಕ ಆರೈಕೆ ದಿನಾಚರಣೆಯ ಅಂಗವಾಗಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಉಪಶಾಮಕ ಔಷಧ ಮತ್ತು ಸಹಾಯಕ ಆರೈಕೆ ವಿಭಾಗವು ದೀರ್ಘಕಾಲದ ರೋಗದಿಂದ ಮಡಿದ ತಮ್ಮ ಪ್ರೀತಿಪಾತ್ರರ ನೆನಪಿಗಾಗಿ ಅವರ ಸಂಬಂಧಿಕರಿಂದ ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಮಣಿಪಾಲದ ಎಂಡ್-ಪಾಯಿಂಟ್ ಗೇಟ್ ಬಳಿಯ ಮಕ್ಕಳ ಉದ್ಯಾನವನದಲ್ಲಿ ಕಾರ್ಯಕ್ರಮ ನಡೆಯಿತು. ನಂತರ, ಶಿರ್ಡಿ ಸಾಯಿಬಾಬಾ ಕ್ಯಾನ್ಸರ್ ಆಸ್ಪತ್ರೆಯ ಮುಂಭಾಗದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಗಿಡಮೂಲಿಕೆ ಸಸ್ಯಗಳನ್ನು ವಿತರಿಸಲಾಯಿತು.
ಪ್ರತೀ ಅಕ್ಟೋಬರ್ ತಿಂಗಳ ಎರಡನೇ ಶನಿವಾರವನ್ನು ವಿಶ್ವ ಆರೈಕೆ ಮತ್ತು ಪ್ರಶಾಮಕ ಚಿಕಿತ್ಸಾ ದಿನವನ್ನಾಗಿ ಆಚರಿಸಲಾಗುತ್ತದೆ.
ಆ ಮೂಲಕ ಪ್ರಶಾಮಕ ಆರೈಕೆಯ ಕುರಿತು ಅರಿವು ಮೂಡಿಸುವ ಮತ್ತು ಅದನ್ನು ಜಾಗತಿಕವಾಗಿ ಎಲ್ಲೆಡೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.
ಪ್ರಶಾಮಕ ಆರೈಕೆಯ ಪ್ರಯೋಜನವನ್ನು ಪಡೆದುಕೊಂಡ ಸಂಬಂಧಿಕರು ತಮ್ಮ ಅನುಭವವನ್ನು ಹಂಚಿಕೊಂಡರು. ಡಾ. ಸೀಮಾ ರಾವ್ ವಂದನಾರ್ಪಣೆಗೈದರು.
Kshetra Samachara
10/10/2020 05:35 pm