ಉಡುಪಿ: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪೋಷಣ್ ಮಾಸಾಚರಣೆ ಹಾಗೂ ಪ್ರಧಾನಮಂತ್ರಿ ಮಾತೃವಂದನ ಯೋಜನೆಯ ಸಪ್ತಾಹ ಕಾರ್ಯಕ್ರಮವು ನಗರದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು.
ಭಾಗೀದಾರ ಇಲಾಖೆಗಳು ಪೋಷಣ್ ಮಾಸಾಚರಣೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮಗಳನ್ನು ವೇಳಾಪಟ್ಟಿಯನ್ವಯ ಆಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಕಾರ್ಯಕ್ರಮದಲ್ಲಿ ಪೋಷಣ್ ಮಾಸಾಚರಣೆಯ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಉಪನಿರ್ದೇಶಕಿ ವೀಣಾ ವಿವೇಕಾನಂದ ನಿರೂಪಿಸಿ, ವಂದಿಸಿದರು.
Kshetra Samachara
13/09/2022 02:17 pm