ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉದ್ಯಾವರ: "ಅವೈಜ್ಞಾನಿಕ ಲಾಕ್‍ಡೌನ್ ವಲಸೆ ಕಾರ್ಮಿಕರ ಮಾರಣ ಹೋಮಕ್ಕೆ ಕಾರಣ"

ಉದ್ಯಾವರ: ಅವೈಜ್ಞಾನಿಕ ಲಾಕ್‍ಡೌನ್‍ನಿಂದ ಕೊರೊನಾ ನಿಯಂತ್ರಣವಾಗದೆ ವಲಸೆ ಕಾರ್ಮಿಕರ ಮಾರಣಹೋಮಕ್ಕೆ ಕಾರಣವಾಯಿತು. ಆದರೆ, ಅದನ್ನೇ ತಮ್ಮ ರಾಜಕೀಯ ನಡೆ ಎಂಬುದಾಗಿ ಪರಿಗಣಿಸಿದ ಕೇಂದ್ರ ಸರಕಾರ "ಗಂಟೆ ಬಾರಿಸಿ, ಚಪ್ಪಾಳೆ ಹೊಡೆಯಿರಿ, ದೀಪ ಹೊತ್ತಿಸಿ ಕೊರೊನಾ ಓಡಿಸಿ" ಎಂದು ಗಿಮಿಕ್ ಮಾಡಿದ್ದರಿಂದ ಇಂದು ಈ ರೋಗ ಹರಡುವಿಕೆಯಲ್ಲಿ ವಿಶ್ವದಲ್ಲೇ 2ನೇ ಸ್ಥಾನಕ್ಕೆ ದೇಶ ಬರುವಂತಾಯಿತು. ಆದರೂ ಈಗ ಜನರ ಬದುಕಿಗೆ ಸಹಾಯವಾದುದು ಕಾಂಗ್ರೆಸ್ ಸರಕಾರ ಜಾರಿಗೆ ತಂದ ಆಹಾರ ಭದ್ರತೆ ಕಾನೂನು, ನರೇಗಾ ಕಾನೂನು ಮತ್ತು ಕಾಂಗ್ರೆಸ್ ಕಾಲದಲ್ಲಿ ನೇಮಕವಾದ ಆಶಾ ಕಾರ್ಯಕರ್ತರು ಎಂಬುದನ್ನು ಆಡಳಿತ ಪಕ್ಷ ಮರೆಯಬಾರದು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.

ಅವರು ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಈ ಲಾಕ್‍ಡೌನ್ ಸಂದರ್ಭ ಮರಳು ದಂಧೆ, ಅಕ್ರಮ ಮರ ಸಾಗಾಟ, ಸರಕಾರಿ ಸಿಮೆಂಟ್ ಬಳಸಿ ಸ್ವಂತ ಕಟ್ಟಡ ನಿರ್ಮಾಣ ದಂತಹ ಅಕ್ರಮಗಳಲ್ಲಿ ಬಿಜೆಪಿ ಮುಖಂಡರು ಭಾಗಿಯಾಗಿರುವುದು ನಾಚಿಕೆಗೇಡು. ನೆರೆ ಪರಿಹಾರ ಶೀಘ್ರ ಫಲಾನುಭವಿಗಳಿಗೆ ವಿತರಿಸಬೇಕು. ಇಲ್ಲವಾದರೆ ಸರಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಬೀದಿಗಿಳಿದು ಹೋರಾಟ ಮಾಡಬೇಕಾದೀತು ಎಂದು ಎಚ್ಚರಿಸಿದರು.

ಕಾಪು ಉತ್ತರ ವಲಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚರಣ್ ವಿಠಲ್, ಇಂಟಕ್ ಅಧ್ಯಕ್ಷ ಉಮೇಶ್ ಕಾಂಚನ್, ಉದ್ಯಾವರ ಗ್ರಾಪಂ ಮಾಜಿ ಅಧ್ಯಕ್ಷೆ ಸುಗಂಧಿ ಶೇಖರ್, ಮಾಜಿ ಉಪಾಧ್ಯಕ್ಷ ರಿಯಾಝ್ ಪಳ್ಳಿ ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

26/09/2020 09:19 pm

Cinque Terre

13.39 K

Cinque Terre

2

ಸಂಬಂಧಿತ ಸುದ್ದಿ