ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲೆಯ ಜನರಿಗೆ ಗುಡ್‌ ನ್ಯೂಸ್‌ ಕೊಟ್ಟ ರಘುಪತಿ ಭಟ್

ಉಡುಪಿ: ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದ್ದು, ಸಚಿವ ಸಂಪುಟ ಸಭೆಯ ಒಪ್ಪಿಗೆಯಷ್ಟೇ ದೊರೆಯಬೇಕಾಗಿದೆ ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲಾಸ್ಪತ್ರೆಯನ್ನು 250 ಬೆಡ್‌ಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಕಟ್ಟಡ ಹಾಗೂ ಕಲ್ಪಿಸಬೇಕಾದ ಸೌಲಭ್ಯಗಳು ಕುರಿತ ಸಂಪೂರ್ಣ ವರದಿಯನ್ನು ನೀಡಲಾಗಿದೆ. ಈ ವರದಿಯ ಆಧಾರದ ಮೇಲೆ 150 ಕೋಟಿ ರೂ. ಯೋಜನೆಯ ಪ್ರಸ್ತಾವನೆಗೆ ಈಗಾಗಲೇ ಆರ್ಥಿಕ ಇಲಾಖೆ ಒಪ್ಪಿಗೆಯನ್ನು ನೀಡಿದೆ ಎಂದು ತಿಳಿಸಿದರು.

ಈ ಯೋಜನೆಯ ಪ್ರಸ್ತಾವನೆ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆಗೊಳ್ಳಲು ಬಾಕಿಯಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು. ಆದ್ದರಿಂದ ಉಡುಪಿ ಜಿಲ್ಲಾ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಸಂಬಂಧ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹವನ್ನು ಕೈಗೊಂಡವರು ತಮ್ಮ ಪ್ರತಿಭಟನೆಯನ್ನು ಹಿಂಪಡೆಯಬೇಕು ಎಂದು ಶಾಸಕರು ವಿನಂತಿಸಿಕೊಂಡಿದ್ದಾರೆ.

Edited By : Vijay Kumar
Kshetra Samachara

Kshetra Samachara

01/10/2020 06:58 pm

Cinque Terre

11.99 K

Cinque Terre

5

ಸಂಬಂಧಿತ ಸುದ್ದಿ