ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ‌ ಜಿಲ್ಲೆಯಲ್ಲಿ ಕೊರೋನಾ ವ್ಯಾಕ್ಸಿನ್ ಡ್ರೈ ರನ್ ಗೆ ಚಾಲನೆ

ಉಡುಪಿ: ಉಡುಪಿ ಜಿಲ್ಲೆಯ 8 ಕೇಂದ್ರಗಳಲ್ಲಿ ಕೋವ್ಯಾಕ್ಸಿನ್ ಡ್ರೈರನ್ ಗೆ ಇಂದು ಚಾಲನೆ ಸಿಕ್ಕಿದೆ. ಉಡುಪಿಯ ಜಿಲ್ಲಾ ಕೇಂದ್ರದಲ್ಲಿ ಡ್ರೈರನ್ ಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಚಾಲನೆ ನೀಡಿದರು.

ಉಡುಪಿ ನಗರದ ಕೂಸಮ್ಮ ಶಂಭು ಶೆಟ್ಟಿ ಮಹಿಳಾ ಮತ್ತು‌ ಮಕ್ಕಳ ಆಸ್ಪತ್ರೆಯಲ್ಲಿ ಅಣುಕು ಕೋವ್ಯಾಕ್ಸಿನ್ ಚುಚ್ಚುಮದ್ದು ಕೊಡುವ ಮೂಲಕ ಚಾಲನೆ ನೀಡಲಾಯಿತು.

ಜಿಲ್ಲೆಯ 8 ಕೇಂದ್ರಗಳಲ್ಲಿ ಏಕಕಾಲದಲ್ಲಿ 25 ಜನರಿಗೆ ಕೋವ್ಯಾಕ್ಸಿನ್ ಚುಚ್ಚುಮದ್ದು ಮಾಕ್ ಟೆಸ್ಟ್ ನಡೆಯುತ್ತಿದೆ. 852 ಆರೋಗ್ಯ ಸಂಸ್ಥೆಯಲ್ಲಿ ವ್ಯಾಕ್ಸಿನ್ ಹಂಚಿಕೆ ನಡೆಯಲಿದ್ದು ಲೋಪದೋಷ ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತಿದೆ.

ಈಗಾಗಲೇ 19562 ಫಲಾನುಭವಿಗಳನ್ನು ಜಿಲ್ಲಾಡಳಿತ ಗುರುತಿಸಿದ್ದು,ವೇಟಿಂಗ್ ರೂಂ, ವ್ಯಾಕ್ಸಿನೇಶನ್ ರೂಂ ಹಾಗೂ ಅಬ್ಸರ್ ವೇಷನ್ ರೂಂ ವ್ಯವಸ್ಥೆ ಮಾಡಲಾಗಿದೆ.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಎರಡನೇ ಹಂತದಲ್ಲಿ ‌ಫ್ರಂಟ್ ಲೈನ್ ವರ್ಕರ್ಸ್ ಹಾಗೂ ಮೂರನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ.

ಎಲೆಕ್ಷನ್ ಹಂತದ ಮಾದರಿಯಲ್ಲಿ ಲಸಿಕೆ ಹಂಚಿಕೆ ‌ನಡೆಯಲಿರುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರತಿಕ್ರಿಯೆ ನೀಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

08/01/2021 11:35 am

Cinque Terre

18.05 K

Cinque Terre

0

ಸಂಬಂಧಿತ ಸುದ್ದಿ