ಉಡುಪಿ:ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕ ಕೆ ರಘುಪತಿ ಭಟ್ ಅವರು ಸಾರ್ವಜನಿಕರಿಗೆ ಸಮರ್ಪಕವಾದ ಸೇವೆ ನೀಡುವಲ್ಲಿ ಜಿಲ್ಲೆಯ ಡಯಾಲಿಸಿಸ್ ವಿಭಾಗವನ್ನು ಸುಲಲಿತವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಿಗೆ ದೂರವಾಣಿ ಮೂಲಕ ಮಾತನಾಡಿ ಸಂಸ್ಥೆಯ ಸಿಬ್ಬಂದಿಗಳಿಗೆ ವೇತನ ಪಾವತಿಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ನಾಗಭೂಷಣ್ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್, ವೈದ್ಯಾಧಿಕಾರಿಗಳಾದ ಚಂದ್ರಶೇಖರ್ ಅಡಿಗ ಉಪಸ್ಥಿತರಿದ್ದರು.
Kshetra Samachara
28/08/2021 06:44 pm