ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕಾಡೂರು ಗ್ರಾಮ ಪಂಚಾಯತ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಉಡುಪಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ (ರಿ) ಹಾಗೂ ಕಾಡೂರು ಗ್ರಾಮ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ 75ನೇ ಸ್ತಾತಂತ್ರೋತ್ಸವದ ಅಮೃತ ಮಹೋತ್ಸವದ ಆಚರಣೆಯ ಅಂಗವಾಗಿ ಕಾಡೂರು ಗ್ರಾಮ ಪಂಚಾಯತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಕಾಡೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಅಮಿತಾ ಜೆ, ಬ್ರಹ್ಮಾವರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಗೋಪಾಲ ಪೂಜಾರಿ, ಹಿರಿಯ ವಕೀಲರಾದ ಅಮೃತಕಲಾ ಚಂದ್ರಶೇಖರ್ ಹಾಜರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವಕೀಲರಾದ ಬಿರ್ತಿ ಮಿತೇಶ್ ಶೆಟ್ಟಿ ಕಾನೂನು ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ. ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

26/10/2021 04:48 pm

Cinque Terre

1.98 K

Cinque Terre

0

ಸಂಬಂಧಿತ ಸುದ್ದಿ