ಉಡುಪಿ: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಇವರ ಆದೇಶದಂತೆ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಇಂದು ನಗರದ ಬೀಡಿನಗುಡ್ಡೆ ದೇವಾಡಿಗರ ಸಭಾಭವನದಲ್ಲಿ ಚಾಲನೆ ನೀಡಲಾಯಿತು.
ಉಡುಪಿಯ ಆದರ್ಶ ಆಸ್ಪತ್ರೆ ಮೂಲಕ ಪ್ರಿವೆನ್ಟೀವ್ ಹೆಲ್ತ್ ಕೇರ್ ಟ್ರೈನಿಂಗ್ ಅಂಡ್ ಚೆಕ್‌ಅಪ್ ಯೋಜನೆ ಯಡಿ ಈ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತದೆ.
ಶಿಬಿರವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಅದ್ಯಕ್ಷೆ ಸುಮಿತ್ರಾ ಆರ್.ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
26/02/2022 10:11 pm