ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರ್ಕಾರದ ವಶಕ್ಕೆ: ಐತಿಹಾಸಿಕ ನಿರ್ಣಯ

ಉಡುಪಿ: ಬಡ ಜನತೆಗೆ ಉಪಯುಕ್ತ ಸೇವೆ ನೀಡುತ್ತಿದ್ದ, ಖಾಸಗಿಯವರ ನಿರ್ವಹಣೆಯಿಂದ ದುಃಸ್ಥಿತಿಗೆ ಒಳಗಾಗಿದ್ದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆಸ್ಪತ್ರೆಯ ನಿರ್ವಹಣೆ ಸರ್ಕಾರಕ್ಕೆ ಹಸ್ತಾಂತರ ಮಾಡಿ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ.

200 ಬೆಡ್ ಗಳ ಈ ಆಸ್ಪತ್ರೆಗೆ ಪ್ರಸ್ತುತ ಇರುವ ಎಲ್ಲ ಸಿಬ್ಬಂದಿಗಳ ಸಹಿತ 103 ಮಂದಿ ಹೆಚ್ಚುವರಿ ಸಿಬ್ಬಂದಿ ಹಾಗೂ ವಾರ್ಷಿಕ ಅನುದಾನ ರೂ. 9.83 ಕೋಟಿಗೆ ಅನುಮೋದನೆ ನೀಡಲಾಗಿದೆ.

ಉಡುಪಿ ಜನತೆಗೆ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಕೈಗೊಂಡ ಈ ಐತಿಹಾಸಿಕ ನಿರ್ಣಯಕ್ಕೆ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾll ಕೆ ಸುಧಾಕರ್ ಅವರಿಗೆ ಉಡುಪಿ ಜನತೆಯ ಪರವಾಗಿ ಶಾಸಕ ರಘುಪತಿ ಭಟ್ ಅಭಿನಂದನೆ ಸಲ್ಲಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

30/03/2022 08:22 pm

Cinque Terre

2.16 K

Cinque Terre

0

ಸಂಬಂಧಿತ ಸುದ್ದಿ