ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಾನವ ಹಕ್ಕುಗಳ ಹೋರಾಟಗಾರ ಡಾ. ರವೀಂದ್ರನಾಥ ಶಾನುಭಾಗ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಉಡುಪಿ: ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಮುಖ್ಯಸ್ಥ ಮತ್ತು ಹಿರಿಯ ನಾಗರಿಕರ ಹಕ್ಕುಗಳ ಹೋರಾಟಗಾರ, ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತ ಆಗಿದೆ. ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಶಾನುಭಾಗ್ ಅವರಿಗೆ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ರಾತ್ರಿ ಮನೆಯಲ್ಲಿ ಶಾನುಭಾಗ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಕುಟುಂಬಸ್ಥರು ಅವರನ್ನು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿಗೆ ದಾಖಲು ಮಾಡಿದ್ದಾರೆ. ಆಂಜಿಯೋಪ್ಲಾಸ್ಟ್ ಮಾಡಲಾಗಿದ್ದು, ಶಾನುಭಾಗ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಸ್ಟಂಟ್ ಅಳವಡಿಸಲಾಗಿದೆ. ತಜ್ಞ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಎರಡು ಮೂರು ದಿನಗಳ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಬಹುದು ಎಂದು ಕೆಎಂಸಿ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮಾಹಿತಿ ನೀಡಿದ್ದಾರೆ.

Edited By : PublicNext Desk
Kshetra Samachara

Kshetra Samachara

01/04/2022 11:19 am

Cinque Terre

1.82 K

Cinque Terre

0

ಸಂಬಂಧಿತ ಸುದ್ದಿ