ಉಡುಪಿ : ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ರೋಗಗಳಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.
ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಡೆಂಗ್ ಮತ್ತು ಮಲೇರಿಯಾ ರೋಗ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ರೋಗಗಳು ಬರುವ ಸಾಧ್ಯತೆ ಅಧಿಕವಿದ್ದು, ಮಳೆ ನೀರು ಎಲ್ಲೆಂದರಲ್ಲಿ ನಿಲ್ಲುವುದರಿಂದ ಸೊಳ್ಳೆಗಳು ಸಂತಾನೋತ್ಪತ್ತಿಗೊಳ್ಳುವುದರೊಂದಿಗೆ ಹೆಚ್ಚಿನ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್, ಮಲೇರಿಯಾ ಸೇರಿದಂತೆ ವಿವಿಧ ರೋಗಗಳು ಹರಡುತ್ತವೆ ಎಂದರು.
ಸೊಳ್ಳೆ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಸ್ಥಳೀಯ ಸಂಸ್ಥೆಗಳು ಹಾಗೂ ಆರೋಗ್ಯ ಇಲಾಖೆ ಕೈಗೊಳ್ಳಬೇಕು. ಈ ಬಗ್ಗೆ ಸಾರ್ವಜನಿಕ ರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದರು.
Kshetra Samachara
14/04/2022 12:05 pm