ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ ಕೆಎಂಸಿಗೆ ಗುಣಮಟ್ಟದ ಪ್ರಮಾಣಪತ್ರ

ಮಣಿಪಾಲ : ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಸಿಎಎಚ್‌ಓ - ೩ಎಂ – ಸಿಎಸ್ಎಸ್‌ಡಿ -ಎಸಿಇ ಪ್ರಮಾಣಪತ್ರ ದೊರತಿದೆ. ಆರೋಗ್ಯ ಸೇವೆಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ನಿರಂತರವಾಗಿ ಕಾಯ್ದುಕೊಳ್ಳುವ ಗುರಿ ಯೊಂದಿಗೆ ವಿವಿಧ ಆರೋಗ್ಯನಿರ್ವಹಣೆಯಲ್ಲಿ ತೊಡಗಿಸಿಕೊಂಡಿರುವ ಲಾಭೋದ್ದೇಶವಿಲ್ಲದ ಸಂಸ್ಥೆ ಸಿಎಎಚ್‌ಓ, ಗುಣಮಟ್ಟ ಸುಧಾರಣೆಯ ಉಪಕ್ರಮವಾಗಿ ಈ ಜಾಗೃತಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.

ಮಾಹೆ ಮಣಿಪಾಲದ ಪ್ರೊಚಾನ್ಸಲರ್ ಡಾ.ಎಚ್.ಎಸ್. ಬಲ್ಲಾಳ್ ಮತ್ತು ಮಾಹೆ ಮಣಿಪಾಲದ ಸಹ ಕುಲಪತಿ (ಆರೋಗ್ಯ ಮತ್ತು ದಂತ ವಿಜ್ಞಾನ) ಡಾ.ಪಿ.ಎಲ್.ಎನ್.ಜಿ.ರಾವ್ ಮಣಿಪಾಲ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮತ್ತು ಆಸ್ಪತ್ರೆಯ ಸೋಂಕು ನಿಯಂತ್ರಣ ಸಮಿತಿ ಮುಖ್ಯಸ್ಥ ಡಾ.ಮುರಳೀಧರ ವರ್ಮ ಮತ್ತು ಗುಣಮಟ್ಟ ಅನುಷ್ಠಾನ ಸಲಹೆಗಾರ ಡಾ. ಸುನೀಲ್ ಸಿ.ಮುಂಡ್ಯೂರ್ ಇವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.

Edited By : PublicNext Desk
Kshetra Samachara

Kshetra Samachara

17/06/2022 09:04 pm

Cinque Terre

1.61 K

Cinque Terre

0

ಸಂಬಂಧಿತ ಸುದ್ದಿ