ಉಡುಪಿ : ಜೀವನದಲ್ಲಿ ಶ್ರೇಷ್ಠದಾನವಾದ ರಕ್ತದಾನದಿಂದ ಆಪತ್ತಿನಲ್ಲಿರುವವರ ಜೀವರಕ್ಷಣೆ ಮಾಡಲು ಸಾಧ್ಯವಾ ಗುತ್ತದೆ ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್ ಹೇಳಿದ್ದಾರೆ.
ಅವರು ಚಿಟ್ಟಾಡಿಯ ಸೈಂಟ್ ಮೇರಿಸ್ ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಯ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಅಪ್ಪು ಅಭಿಮಾನಿಗಳ ಬಳಗ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಮ ಹಾಗೂ ಸೈಂಟ್ ಮೇರಿಸ್ ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ ಚಿಟ್ಟಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಆಯೋಜಿಸಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಅತೀ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ, ಸ್ವಯಂ ರಕ್ತದಾನ ಮಾಡಿ ಮಾತನಾಡುತಿದ್ದರು.
ಆರೋಗ್ಯವಂತ ಮನುಷ್ಯ ರಕ್ತದಾನ ಮಾಡಲು ಅರ್ಹನಾಗಿದ್ದು, ಎರಡು ಮೂರು ತಿಂಗಳಿಗೊಮ್ಮೆ ಒಂದು ಯೂನಿಟ್ ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗಿ ಚೈತನ್ಯಶೀಲರಾಗಿರಲು ಸಾಧ್ಯವಾಗುತ್ತದೆ ಎಂದರು.
Kshetra Samachara
23/06/2022 04:12 pm