ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಕುಂದಾಪುರ ಸರಕಾರಿ ಆಸ್ಪತ್ರೆಗೆ 35 ಲಕ್ಷ ರೂ.ಗಳ ಉಪಕರಣಗಳ ಹಸ್ತಾಂತರ

ಕುಂದಾಪುರ: ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ನವಜಾತ ಶಿಶುಗಳ ವಿಭಾಗಕ್ಕೆ 5 ಬೆಡ್‌ಗಳ ಸುಸಜ್ಜಿತ ಐಸಿಯು ನಿರ್ಮಾಣವಾಗಿದ್ದು, ಇದಕ್ಕೆ ಅಗತ್ಯವಿದ್ದ ಉಪಕರಣಗಳನ್ನು ಅಮ್ಮುಂಜೆ ನಾರಾಯಣ ನಾಯಕ್ ಅವರ ಸ್ಮರಣಾರ್ಥ ನೀಡಲಾಗಿದ್ದು ಸಮಾಜದಿಂದ ಪಡೆದುದನ್ನು ಸಮಾಜಕ್ಕೆ ನೀಡಬೇಕೆನ್ನುವ ಇಂಥ ತುಡಿತ ಎಲ್ಲರಿಗೂ ಮಾದರಿ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಕುಂದಾಪುರ ಸರಕಾರಿ ಆಸ್ಪತ್ರೆಯ ನವಜಾತ ಶಿಶುಗಳ ವಿಭಾಗದ ಐಸಿಯುವಿಗೆ ಅಮ್ಮುಂಜೆ ನಾರಾಯಣ ನಾಯಕ್-ರತ್ನಾ ನಾಯಕ್ ಅವರ ಸ್ಮರಣಾರ್ಥ ಕುಟುಂಬದವರು ನೀಡಿದ 35 ಲಕ್ಷ ರೂ.ಗಳ ಉಪಕರಣಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಗುರುವಾರ ಸಂಜೆ ಭಾಗವಹಿಸಿ ಅವರು ಮಾತನಾಡಿದರು.

ಸಾಮಾಜಿಕ ಕಳಕಳಿಯೊಂದಿಗೆ ಅವರೇ ಮುಂದೆ ಬಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮೂಲಕ ಉಪಕರಣಗಳನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ನೀಡಿರುವುದು ಶ್ಲಾಘನೀಯ. ಇದರ ಸರಿಯಾದ ನಿರ್ವಹಣೆ, ನುರಿತ ಸಿಬಂದಿಗಳ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ದೊರೆಯುವಂತಾಗಲಿ ಎಂದು ಜಿಲ್ಲಾಧಿಕಾರಿ ಹಾರೈಸಿದರು.

Edited By : PublicNext Desk
Kshetra Samachara

Kshetra Samachara

04/08/2022 09:42 pm

Cinque Terre

1.34 K

Cinque Terre

0

ಸಂಬಂಧಿತ ಸುದ್ದಿ