ಕುಂದಾಪುರ: ಕೊಲ್ಲೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉಡುಪಿಯ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಭೇಟಿ ನೀಡಿ ಪರಿಶೀಲನೆ ನಡೆಸಿ, ಅವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ.
ಕೇಂದ್ರದ ವಿಚಾರಣಾ ವಿಭಾಗ, ಔಷಧಾಲಯ, ಪ್ರಯೋಗಾಲಯ, ನೋಂದಣಿ ವಿಭಾಗ, ವಾರ್ಡ್‌ಗಳು, ವಿದ್ಯುತ್, ಶೌಚಾಲಯ ವ್ಯವಸ್ಥೆ ಮೊದಲಾದವುಗಳನ್ನು ಪರಿಶೀಲಿಸಿದ ಅವರು, ಆಸ್ಪತ್ರೆ ಕಟ್ಟಡ ಶಿಥಿಲಗೊಂಡಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಆಸ್ಪತ್ರೆಗೆ ಸಿಸಿ ಕ್ಯಾಮೆರಾ ಅಳವಡಿಕೆ ಮಾಡುವಂತೆ ತಾಕೀತು ಮಾಡಿದರು.
ಇದೇ ಸಂದರ್ಭ ನ್ಯಾಯಾಧೀಶರು ಆಸ್ಪತ್ರೆಯಲ್ಲಿದ್ದ ರೋಗಿಗಳ ಆರೋಗ್ಯ ವಿಚಾರಿಸಿದ್ದು ಬೇಡಿಕೆಗಳ ಕುರಿತು ಪ್ರಶ್ನಿಸಿದರು. ಕೊಲ್ಲೂರು ಪ್ರವಾಸಿ ಕೇಂದ್ರವಾಗಿದ್ದು ೨೪ ಗಂಟೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ವೈದ್ಯಕೀಯ ಸೇವೆ ದೊರೆತರೆ ಅನುಕೂಲವಾಗುತ್ತದೆ ಎಂದು ಮಹಿಳೆಯೊಬ್ಬರು ತಿಳಿಸಿದರು.
ಕೇಂದ್ರದ ವೈದ್ಯಾಧಿಕಾರಿ ಡಾ.ಶೈಲೇಶ್ ರಾವ್, ಕೊಲ್ಲೂರು ಗ್ರಾಪಂ ಅಧ್ಯಕ್ಷ ಶಿವರಾಮಕೃಷ್ಣ ಭಟ್, ಎನ್‌ಆರ್‌ಎಲ್‌ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ್ ಆಚಾರ್ ಉಪಸ್ಥಿತರಿದ್ದರು.
Kshetra Samachara
28/09/2022 02:44 pm