ಉಡುಪಿ: ಕಾರ್ಮಿಕ ಇಲಾಖೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು ಕಾರ್ಮಿಕ ಅಧಿಕಾರಿಗಳ ಕಚೇರಿ ಉಡುಪಿ ಉಪ ವಿಭಾಗ ರಾಜತಾದ್ರಿ ಮಣಿಪಾಲ ವತಿಯಿಂದ "ಶ್ರಮಿಕ ಸಂಜೀವಿನಿ" ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಒದಗಿಸುವ ಸಂಚಾರಿ ಕ್ಲಿನಿಕ್ ಗೆ ಶಾಸಕ ಕೆ ರಘುಪತಿ ಭಟ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ,ಪೌರಾಯುಕ್ತರಾದ ಉದಯ್ ಶೆಟ್ಟಿ, ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಕುಮಾರ್ ಹಾಗೂ ನಗರಸಭಾ ಸದಸ್ಯರು ಉಪಸ್ಥಿತರಿದ್ದರು.
Kshetra Samachara
30/09/2022 08:12 pm