ಉಡುಪಿ: ಹಿರಿಯ ಕಾಂಗ್ರೆಸ್ ನಾಯಕಿ, ಮಧ್ವನಗರ ನಿವಾಸಿ ಇಂದಿರಾ ಸುವರ್ಣ ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು ನಸುಕಿನ ವೇಳೆ ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಎರಡು ಬಾರಿ ತಾಲೂಕು ಪಂಚಾಯತ್ ಸದಸ್ಯರಾಗಿ, ಮಹಿಳಾ ಕಾಂಗ್ರೆಸ್ನ ಸಕ್ರಿಯ ಸದಸ್ಯರಾಗಿ ಕಾಂಗ್ರೆಸ್ ಪಕ್ಷಕ್ಕೆ ತನ್ನದೆ ಆದ ಕೊಡುಗೆಯನ್ನು ನೀಡಿದ್ದರು. ಇವರು ಪುತ್ರಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಸುವರ್ಣ ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.
Kshetra Samachara
21/10/2024 09:13 pm