ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪದ್ಮಶ್ರೀ ಪುರಸ್ಕೃತ ಪ್ರವಚನಕಾರ ಬನ್ನಂಜೆ ಗೋವಿಂದಾಚಾರ್ಯ ಇನ್ನಿಲ್ಲ

ಉಡುಪಿ: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ(85) ಅಂಬಲಪಾಡಿ ನಿವಾಸದಲ್ಲಿ ಇಂದು ನಿಧನರಾದರು.

ಪ್ರಸಿದ್ಧ ಪ್ರವಚನಕಾರ, ಮಧ್ವ ಸಿದ್ಧಾಂತದ ಪ್ರತಿಪಾದಕರಾಗಿ, ಪತ್ರಕರ್ತರಾಗಿ ಅನೇಕ ಗ್ರಂಥಗಳನ್ನು ಬರೆದಿದ್ದ ಬನ್ನಂಜೆ ಯವರು ಪದ್ಮಶ್ರೀ ಪುರಸ್ಕೃತರು.

ನಟ ಡಾ.ವಿಷ್ಣುವರ್ಧನ್ ಅವರ ಆಧ್ಯಾತ್ಮಿಕ ಗುರುವೂ ಹೌದು.

ಹಲವಾರು ಕೃತಿಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ತರ್ಜುಮೆಗೈದ ಪಂಡಿತರಾಗಿದ್ದ ಅವರು, ಮೂರು ಚಲನ ಚಿತ್ರಗಳಿಗೆ ಸಂಭಾಷಣೆಯನ್ನೂ ಬರೆದಿದ್ದರು.

ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯ ಸಂಭಾಷಣೆ ಬರೆದ ಚಿತ್ರಗಳು. ಹಲವು ಚಾರಿತ್ರಿಕ ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದ ಕವಿಯೂ ಹೌದು.

ಉಪನಿಷತ್ತಿನ ಅಧ್ಯಾಯಗಳಿಗೆ ಟಿಪ್ಪಣಿ ಬರೆದಿದ್ದ ಗೋವಿಂದಾಚಾರ್ಯರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

Edited By : Nirmala Aralikatti
Kshetra Samachara

Kshetra Samachara

13/12/2020 12:24 pm

Cinque Terre

13.64 K

Cinque Terre

7

ಸಂಬಂಧಿತ ಸುದ್ದಿ