ಉಡುಪಿ: ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಡುಪಿ ಕನ್ನರ್ಪಾಡಿ ನಿವಾಸಿ ಶರಣ್ ಶೆಟ್ಟಿ- ನವ್ಯ ಶೆಟ್ಟಿ ಕಳೆದ 30 ವರ್ಷಗಳಿಂದ ವಿದ್ಯುತ್ ಸಂಪರ್ಕ ವೇ ಇಲ್ಲದ ದಲಿತ ಸಮುದಾಯದ ಲೀಲಾ ಅವರ ಮನೆಗೆ ಕಲ್ಪಿಸಲಾದ ವಿದ್ಯುತ್ ಸಂಪರ್ಕ ಉದ್ಘಾಟಿಸಿದರು.
ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಡಿಯಾಳಿ ಮತ್ತು ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಈ ಮನೆಗೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು. ಇಂದು ತಮ್ಮ ಮದುವೆ ಸಂಪ್ರದಾಯ ಮುಗಿದ ನಂತರ ನೇರವಾಗಿ ಪೆರಂಪಳ್ಳಿಯಲ್ಲಿರುವ ಲೀಲಾ ಅವರ ಮನೆಗೆ ನವ ದಂಪತಿ ಆಗಮಿಸಿ ವಿದ್ಯುತ್ ಸಂಪರ್ಕ ವ್ಯವಸ್ಥೆ ಉದ್ಘಾಟಿಸಿದರು.
ಈ ಮನೆಯ ವಿದ್ಯುತ್ ಸಂಪರ್ಕದ ಸಂಪೂರ್ಣ ವೆಚ್ಚವನ್ನು ನವದಂಪತಿ, ಆಸರೆ ಚಾರಿಟೇಬಲ್ ಟ್ರಸ್ಟ್ ಗೆ ಹಸ್ತಾಂತರಿಸಿದರು.
ಆಸರೆ ಚಾರಿಟೇಬಲ್ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕಿಣಿ, ಕೋಶಾಧಿಕಾರಿ ಸತೀಶ್ ಕೆ. ಕುಲಾಲ್, ಚೇತನ್ ಕುಮಾರ್ ಕನ್ನರ್ಪಾಡಿ, ಅನಿಲ್ ಶೇರಿಗಾರ್, ಓವಿನ್, ಅಶ್ವಿನ್ ಶೆಟ್ಟಿ, ಸ್ಥಳೀಯರಾದ ಅರುಣ ಎಸ್. ಪೂಜಾರಿ, ಪ್ರಶಾಂತ್ ಪೆರಂಪಳ್ಳಿ, ಡೆನ್ನಿಸ್ ಪ್ರಸನ್ನ, ಆಕಾಶ್ ಪೂಜಾರಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯಶೋದಾ, ನವದಂಪತಿಯ ಕುಟುಂಬಸ್ಥರು ಉಪಸ್ಥಿತರಿದ್ದರು.
Kshetra Samachara
04/01/2021 07:12 pm