ಉಡುಪಿ : ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿ, ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಉಡುಪಿ ಜಿಲ್ಲಾ ಘಟಕದಿಂದ ಕರ್ನಾಟಕ ರಾಜ್ಯ ಶಾಖೆಯ ಪ್ರತಿನಿಧಿಯಾಗಿ ಕೆ. ಸನ್ಮತ್ ಹೆಗ್ಡೆಯನ್ನು ಆಯ್ಕೆ ಮಾಡಲಾಯಿತು.
ಸದ್ರಿಯವರು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಆಡಳಿತ ಮಂಡಳಿ ಸದಸ್ಯರೂ ಹಾಗೂ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ (ರಿ.) ಇದರ ನಿರ್ದೇಶಕರು ಆಗಿರುತ್ತಾರೆ.
Kshetra Samachara
09/01/2021 09:53 am