ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಟ: "ಬದುಕಿನಲ್ಲಿ ಆತ್ಮವಿಶ್ವಾಸ ಮೈಗೂಡಿಸಿಕೊಂಡಾಗ ಯಶಸ್ಸು ಸಾಧ್ಯ"

ಕೋಟ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಯಾವುದೇ ಕಠಿಣ ಪರಿಸ್ಥಿತಿಯಲ್ಲಿ ಕುಗ್ಗದೆ ಆತ್ಮವಿಶ್ವಾಸ ಮೈಗೂಡಿಸಿಕೊಂಡಾಗ ಬದುಕಿನಲ್ಲಿ ಯಶಸ್ಸಿನ ಮೈಲಿಗಲ್ಲು ಏರಲು ಸಾಧ್ಯ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಆಪ್ತ ಸಹಾಯಕ ಹರೀಶ್ ಕುಮಾರ್ ಶೆಟ್ಟಿ ತಿಳಿಸಿದರು.

ಅವರು ಎಮ್.ಐ.ಟಿ. ಕುಂದಾಪುರ ಪ್ರಥಮ ವರ್ಷದ ಎಂ.ಬಿ.ಎ. ವಿದ್ಯಾರ್ಥಿಗಳಿಗೆ ಕೋಟದ ಕಾರಂತ ಥೀಮ್ ಪಾರ್ಕ್ ನಲ್ಲಿ ಆಯೋಜಿಸಿದ “ಪಂಚಾಯತ್‌ಗೆ ಎಂ.ಬಿ.ಎ ವಿದ್ಯಾಥಿಗಳ ಕೊಡುಗೆ” ವಿಷಯದ ಬಗ್ಗೆ ಏರ್ಪಡಿಸಿದ ಉಪನ್ಯಾಸ ಕಾರ್ಯಾಗಾರದಲ್ಲಿ ಮಾತನಾಡಿದರು.

ತಮ್ಮ ವಿದ್ಯಾರ್ಥಿ ಜೀವನದಲ್ಲೇ ನಾಯಕತ್ವ ಗುಣ ಬೆಳೆಸಿಕೊಂಡು, ಸಮಾಜಕ್ಕೆ ತಮ್ಮಿಂದಾದ ಸೇವೆ ಸಲ್ಲಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದರು. ಈ ಸಂದರ್ಭ ಕಾರಂತ ಥೀಮ್ ಪಾರ್ಕ್‌ನ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮ, ಕಾಲೇಜಿನ ಡೀನ್ ಮತ್ತು ವಿಭಾಗದ ಮುಖ್ಯಸ್ಥೆ ಡಾ. ಪ್ರತಿಭಾ, ಪ್ರಾಧ್ಯಾಪಕರಾದ ಪ್ರೊ.ಅಮೃತ್‌, ಪ್ರೊ. ಕಾವ್ಯ ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

04/02/2021 01:00 pm

Cinque Terre

3.6 K

Cinque Terre

0

ಸಂಬಂಧಿತ ಸುದ್ದಿ