ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಬಿದ್ರಿ: ಪಡುಬಿದ್ರಿಯ ರಾಜಕೀಯ ಧುರೀಣ, ಸಮಾಜಸೇವಕ ಎಸ್.ಪಿ ಉಮರ್ ಫಾರೂಕ್ ನಿಧನ

ಪಡುಬಿದ್ರಿ: ಪಡುಬಿದ್ರಿ ಪರಿಸರದ ಸಾಮಾಜಿಕ ಕಾರ್ಯಕರ್ತ, ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ,ಕಂಚಿನಡ್ಕ ಎಸ್.ಪಿ. ಕಂಪೌಂಡ್ ನಿವಾಸಿ ಹಾಜಿ ಎಸ್.ಪಿ. ಉಮರ್ ಫಾರೂಕ್‌ರವರು ತಮ್ಮ 60ನೇ ವಯಸ್ಸಿನಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನ ಹೊಂದಿದರು.

ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಸಂಘಟನೆಗಳಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದ ಉಮ್ಮರ್ ಫಾರೂಖ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ, ಪಡುಬಿದ್ರಿ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾಗಿ, ಉಡುಪಿ ಜಿಲ್ಲಾ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ ಜಿಲ್ಲಾಧ್ಯಕ್ಷರಾಗಿ, ಎಸ್ ವೈಎಸ್ ಪಡುಬಿದ್ರಿ ಘಟಕದ ಮಾಜಿ ಅಧ್ಯಕ್ಷರಾಗಿ, ಪಡುಬಿದ್ರಿ ಜುಮಾ ಮಸೀದಿ ಸದಸ್ಯರಾಗಿದ್ದರು.

ಜನತಾದಳದಲ್ಲಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದ ಇವರು ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು.

ಪತ್ನಿ, ಮೂರು ಹೆಣ್ಣು, ಒಂದು ಗಂಡು ಮಗನನ್ನು ಅಗಲಿದ್ದಾರೆ.ಇಂದು ಮದ್ಯಾಹ್ನ ಪಡುಬಿದ್ರಿ ಜುಮ್ಮಾ ಮಸೀದಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಿಕರು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

22/09/2022 10:28 am

Cinque Terre

2.41 K

Cinque Terre

1

ಸಂಬಂಧಿತ ಸುದ್ದಿ