ಉಡುಪಿ: ರಾಜ್ಯದಲ್ಲಿ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ಇಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.
ಖಾಸಗಿ, ಸರಕಾರಿ ಬಸ್, ಆಟೋ ಮತ್ತಿತರ ವಾಹನಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.
ಕೊರೊನಾದಿಂದಾಗಿ ದುಡಿಮೆ ಇಲ್ಲದೆ ಕಂಗೆಟ್ಟ ಹೋಟೆಲ್ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿಲ್ಲ. ಹೋಟೆಲ್ ಅಸೋಸಿಯೇಶನ್ ಲೇಬರ್ಸ್ ಸಂಘಟನೆಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಬಂದ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಬಂದ್ ನಿಂದ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ನಿಲ್ಲಿಸಲು ಸಾಧ್ಯವಿಲ್ಲ. ಯಾಕೆಂದರೆ, ಎಲ್ಲ ರೀತಿಯ ತಯಾರಿ ಈಗಾಗಲೇ ಮಾಡಿಕೊಳ್ಳಲಾಗಿದೆ.
ಈಗ ನಾವು ಹೋಟೆಲ್, ಅಂಗಡಿಗಳನ್ನು ಮುಚ್ಚುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು.
Kshetra Samachara
05/12/2020 09:28 am