ಪಡುಬಿದ್ರಿ: ಮಾಸ್ಕ್ ಹಾಗೂ ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ಪಡುಬಿದ್ರಿ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಮಂಗಳವಾರ ದಂಡ ವಸೂಲಿ ಮಾಡಿ ಎಚ್ಚರಿಕೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನ ಅಪಘಾತ ಹೆಚ್ಚಾಗುತ್ತಿದ್ದು, ಅದರಲ್ಲಿ ಹೆಲ್ಮೆಟ್ ಧರಿಸದೆ ಸಾವನಪ್ಪಿರುವವರ ಸಂಖ್ಯೆಯೇ ಅಧಿಕ.
ಆದ್ದರಿಂದ ಪ್ರತಿಯೊಬ್ಬರೂ ಸುರಕ್ಷತೆ, ಆರೋಗ್ಯದ ದೃಷ್ಟಿಯಿಂದ ಮಾಸ್ಕ್, ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಎಂದು ಪಡುಬಿದ್ರಿ ಪಿಎಸ್ಐ ದಿಲೀಪ್ ಆರ್.ಜಿ. ಎಚ್ಚರಿಸಿದ್ದಾರೆ.
Kshetra Samachara
08/12/2020 05:20 pm