ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಜ.1ರಿಂದ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ಮದ್ಯವ್ಯಸನ ವಿಮುಕ್ತಿ ಶಿಬಿರ

ಉಡುಪಿ: ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಡಿ. 17ಕ್ಕೆ 17 ವರ್ಷಗಳನ್ನು ಪೂರೈಸಿದೆ. ಆರಂಭದಿಂದಲೂ ಸಾಮಾಜಿಕ ಬದ್ಧತೆ ಮತ್ತು ಜನಸಾಮಾನ್ಯರ ಆರೋಗ್ಯ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಬಂದಿರುವ ಆಸ್ಪತ್ರೆ ವತಿಯಿಂದ ಮದ್ಯವ್ಯಸನ ವಿಮುಕ್ತಿ, ಮಾನಸಿಕ ಆರೋಗ್ಯ ಮತ್ತು ಮಕ್ಕಳ ಮಾನಸಿಕ ಆರೋಗ್ಯದ ಬಗ್ಗೆ ನಿರಂತರ ಕಾರ್ಯಕ್ರಮಗಳು ನಡೆಯುತ್ತಿವೆ.

ಮದ್ಯವ್ಯಸನ ಕಾಲಕ್ರಮೇಣ ಸಾಮಾಜಿಕ ಪಿಡುಗಾಗಿ ಪರಿಣಮಿಸುತ್ತಿದ್ದು, ಯಾವುದೇ ಜಾತಿ-ಮತ ವಯಸ್ಸಿನ ಭೇದವಿಲ್ಲದೆ ಎಲ್ಲರಲ್ಲಿಯೂ ಮದ್ಯವ್ಯಸನದ ಚಟ ಕಂಡುಬರುತ್ತಿದೆ.

ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಕಳೆದ 17 ವರ್ಷಗಳಿಂದ ಉಡುಪಿಯ ಜಿಲ್ಲೆಯಾದ್ಯಂತ ಮದ್ಯ ಮತ್ತು ಮಾದಕ ದ್ರವ್ಯ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ಶಾಲೆ-ಕಾಲೇಜುಗಳಲ್ಲಿ, ಸಮುದಾಯದಲ್ಲಿ ಅರಿವು ಮೂಡಿಸುವ ಮತ್ತು ಮದ್ಯವ್ಯಸನಕ್ಕೆ ಚಿಕಿತ್ಸೆ ನೀಡುವ ಕಾರ್ಯಗಳನ್ನು ಮಾಡುತ್ತ ಬಂದಿದೆ.

ಇದುವರೆಗೆ 27 ಮದ್ಯವ್ಯಸನ ವಿಮುಕ್ತಿ ಶಿಬಿರಗಳನ್ನು ಆಯೋಜಿಸಲಾಗಿದೆ.

2021 ಜನವರಿ ಒಂದರಿಂದ ಹತ್ತರ ತನಕ 28ನೇ ಮದ್ಯವ್ಯಸನ ವಿಮುಕ್ತಿ ಶಿಬಿರ ಡಾ.ಪಿ.ವಿ.ಭಂಡಾರಿಯವರ ನೇತೃತ್ವದಲ್ಲಿ ನಡೆಯಲಿದೆ.

ಆಸಕ್ತರು ದಿನಾಂಕ 26.12.2020ರ ಒಳಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

Edited By : Nirmala Aralikatti
Kshetra Samachara

Kshetra Samachara

24/12/2020 05:14 pm

Cinque Terre

5.54 K

Cinque Terre

0

ಸಂಬಂಧಿತ ಸುದ್ದಿ