ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಂಗೊಳ್ಳಿ: ಯಾಂತ್ರೀಕೃತ ಹೂಳೆತ್ತುವಿಕೆ ಸ್ಥಗಿತಗೊಳಿಸಿ; ಗ್ರಾಮಸ್ಥರಿಂದ ಅಹವಾಲು

ತ್ರಾಸಿ ಗ್ರಾಮದ ಸೌಪರ್ಣಿಕಾ ನದಿಯಲ್ಲಿ ನಡೆಯುತ್ತಿರುವ ಯಾಂತ್ರೀಕೃತ ಹೂಳೆತ್ತುವ ಕಾಮಗಾರಿ( ಮರಳುಗಾರಿಕೆ)ಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ತ್ರಾಸಿ, ಮೊವಾಡಿ ಹಾಗೂ ನಾಡ ಗುಡ್ಡೆಯಂಗಡಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಶನ್ ಲಿ.ಕಂಪನಿ, ತ್ರಾಸಿ ಹಾಗೂ ಹೊಸಾಡು ಗ್ರಾಮದ ಸೌಪರ್ಣಿಕಾ ನದಿಯಲ್ಲಿ ಯಾಂತ್ರೀಕೃತ ಹೂಳೆತ್ತುವ ಕಾಮಗಾರಿ ನಡೆಸುತ್ತಿದೆ. ಇದರಿಂದ ನದಿ ಸುತ್ತಮುತ್ತಲಿನ ಗ್ರಾಮದ ನದಿ ದಂಡೆ ಕುಸಿತಕ್ಕೊಳಗಾಗುವ ಭೀತಿ ಇದೆ. ಬಾವಿಯಲ್ಲಿ ಉಪ್ಪು ನೀರು ಬರಲಾರಂಭಿಸಿದ್ದು ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದೆ.

ಯಾಂತ್ರೀಕೃತ ಹೂಳೆತ್ತುವ ಸ್ಥಳದ ಸಮೀಪದಲ್ಲಿರುವ ಡ್ಯಾಮ್ ಒಡೆದು ಹೋಗುವ ಸಾಧ್ಯತೆ ಇದ್ದು, ಮೀನುಗಾರಿಕೆಗೂ ತೊಂದರೆಯಾಗಲಿದೆ. ಪ್ರತಿನಿತ್ಯ ನೂರಾರು ಲಾರಿಗಳು ಅಗಲ ಕಿರಿದಾದ ರಸ್ತೆಯಲ್ಲಿ ಹಗಲಿರುಳೆನ್ನದೆ ಸಂಚರಿಸುತ್ತಿರುವುದರಿಂದ ರಸ್ತೆಯಲ್ಲಿ ಸಂಚರಿಸುವುದು ಅಪಾಯಕಾರಿಯಾಗಿದೆ.

ಹೀಗಾಗಿ ಈ ಪ್ರದೇಶದಲ್ಲಿ ನಡೆಯುತ್ತಿರುವ ಯಾಂತ್ರೀಕೃತ ಹೂಳೆತ್ತುವಿಕೆಯನ್ನು ಸ್ಥಗಿತಗೊಳಿಸಿ ಸಾಂಪ್ರದಾಯಿಕ ಮರಳುಗಾರಿಕೆಗೆ ಅವಕಾಶ ನೀಡಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು. ಈ ವೇಳೆ ಸ್ಥಳಕ್ಕೆ ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು, ಆಗಮಿಸಿ ಗ್ರಾಮಸ್ಥರ ಅಹವಾಲು ಆಲಿಸಿದರು.

Edited By :
Kshetra Samachara

Kshetra Samachara

22/03/2022 05:24 pm

Cinque Terre

6.03 K

Cinque Terre

0

ಸಂಬಂಧಿತ ಸುದ್ದಿ