ಮಲ್ಪೆ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಂಜೂರಾದ ರೂ. 15.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಲ್ಪೆ - ಪಡುಕೆರೆ ನೂತನ ಸಾರ್ವಜನಿಕ ಉದ್ಯಾನವನವನ್ನು ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಉದ್ಘಾಟಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ದೇವಿ ಆಂಜನೇಯ ಫ್ರೆಂಡ್ಸ್ (ರಿ. ) ಸಂಸ್ಥೆಯ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಸಭೆಯಲ್ಲಿ ಶ್ರೇಷ್ಠ ಮೀನುಗಾರ ಪ್ರಶಸ್ತಿ ಪುರಸ್ಕೃತರಾದ ರಾಮ ಕಾಂಚನ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಉಡುಪಿ ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ, ತಾಲೂಕು ಪಂಚಾಯತ್ ಸದಸ್ಯರಾದ ರಾಜೇಂದ್ರ ಪಂದುಬೆಟ್ಟು, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಮೋದ್ ಕೆ ಸಾಲ್ಯಾನ್, ಸುಭಾಷಿಣಿ ಗಂಗಾಧರ್ ಹಾಗೂ ವಿವಿಧ ಸಂಘ ಸಂಸ್ಥೆಯ ಮತ್ತು ವಿವಿಧ ಭಜನಾ ಮಂಡಳಿಯ ಗೌರವ ಅಧ್ಯಕ್ಷರು, ಅಧ್ಯಕ್ಷರು ಮತ್ತು ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
13/01/2021 04:15 pm