ಉಡುಪಿ:ಮಲ್ಪೆ ಮೀನುಗಾರರ ಸಂಘ (ರಿಜಿಸ್ಟರ್ಡ್) ಬಂದರು, ಮಲ್ಪೆ ಉಡುಪಿ ಜಿಲ್ಲೆ ಇದರ ಪದಾಧಿಕಾರಿಗಳು ಹಾಗೂ ಮೀನುಗಾರ ಮುಖಂಡರ ನಿಯೋಗದೊಂದಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ಬೆಂಗಳೂರಿನ ವಿಧಾನಸೌಧದ ಮುಖ್ಯಮಂತ್ರಿಯವರ ಕಚೇರಿಯಲ್ಲಿ ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮೀನುಗಾರರ ಪ್ರಮುಖ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು.
ಪ್ರಮುಖ ಬೇಡಿಕೆಗಳ ಯಾಂತ್ರಿಕ ಮೀನುಗಾರಿಕಾ ದೋಣಿಗಳಿಗೆ ಮಾರಾಟ ತೆರಿಗೆ ರಹಿತ ಡೀಸೆಲ್ ಡೆಲಿವರಿ ಪಾಯಿಂಟ್ ನಲ್ಲಿ ವಿತರಿಸುವುದು.ಟೆಗ್ಮಾ ಶಿಫ್ ಯಾರ್ಡ್ ಗುತ್ತಿಗೆ ಅವಧಿ ವಿಸ್ತರಿಸದೆ ಇರುವುದು. ಬಂದರಿನ ಬೇಸಿನ್ ಒಳಗೆ (ಡ್ರೆಜಿಂಗ್) ಹೂಳೆತ್ತುವ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವುದು. ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ಶಾಸಕರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರಾದ ಶ್ರೀಯುತ ಬಿ. ಎಸ್. ಯಡಿಯೂರಪ್ಪ ಅವರು ಬಜೆಟ್ ನಲ್ಲಿ ಪರಿಗಣಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಕೃಷ್ಣ ಸುವರ್ಣ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನುಗಾರರ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಮೀನುಗಾರರ ಮುಖಂಡರಾದ ಸತೀಶ್ ಕುಂದರ್, ದಯಾನಂದ ಸುವರ್ಣ, ವಿಠಲ ಕರ್ಕೇರ, ಕರುಣಾಕರ ಸಾಲ್ಯಾನ್, ನಾಗರಾಜ ಸುವರ್ಣ, ಸುಭಾಷ್ ಮೆಂಡನ್, ಕಿಶೋರ್ ಸುವರ್ಣ, ಮಹೇಶ್ ಸುವರ್ಣ, ನಾರಾಯಣ ಕರ್ಕೇರ, ರವಿರಾಜ್ ಸುವರ್ಣ ಉಪಸ್ಥಿತರಿದ್ದರು.
Kshetra Samachara
04/02/2021 06:37 pm