ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೀನುಗಾರಿಕಾ ಇಲಾಖೆಗೆ ಸಂಬಂಧಿಸಿದ 3 ಜಿಲ್ಲೆಗಳ ಶಾಸಕರೊಂದಿಗೆ ಬಜೆಟ್ ಪೂರ್ವಭಾವಿ ಸಭೆ - ಶಾಸಕ ರಘುಪತಿ ಭಟ್ ಭಾಗಿ

ಉಡುಪಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಶಾಸಕರೊಂದಿಗೆ ಮೀನುಗಾರಿಕಾ ಇಲಾಖೆಗೆ ಸಂಬಂಧಿಸಿದ ಬಜೆಟ್ ಪೂರ್ವಭಾವಿ ಸಭೆ ಮೀನುಗಾರಿಕಾ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ 05-02-2021 ರಂದು ಬೆಂಗಳೂರಿನ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.

ಉಡುಪಿ ಶಾಸಕ ಶ್ರೀ ಕೆ. ರಘುಪತಿ ಭಟ್ ಸಭೆಯಲ್ಲಿ ಭಾಗವಹಿಸಿ ಮೀನುಗಾರರ ಪ್ರಮುಖ ಬೇಡಿಕೆಗಳಾದ ಯಾಂತ್ರಿಕ ಮೀನುಗಾರಿಕಾ ದೋಣಿಗಳಿಗೆ ಮಾರಾಟ ತೆರಿಗೆ ರಹಿತ ಡೀಸೆಲ್ ಡೆಲಿವರಿ ಪಾಯಿಂಟ್ ನಲ್ಲಿ ವಿತರಿಸುವುದು. ಹಾಗೂ 400 ಲೀಟರ್ ಡೀಸೆಲ್ ನೀಡಲು ಬಜೆಟ್‌ನಲ್ಲಿ ಸೇರಿಸುವ ಬಗ್ಗೆ ಚರ್ಚಿಸಿದರು. ಅಲ್ಲದೆ ಟೆಗ್ಮಾ ಶಿಫ್ ಯಾರ್ಡ್ ಗುತ್ತಿಗೆ ಅವಧಿ ವಿಸ್ತರಿಸದೆ ಇರುವುದು. ಬಂದರಿನ ಬೇಸಿನ್ ಒಳಗೆ (ಡ್ರೆಜಿಂಗ್) ಹೂಳೆತ್ತುವ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವುದು. ಮಲ್ಪೆ ಬಂದರಿನಲ್ಲಿರುವ ಸ್ಲಿಫ್ ವೇ ನಿರ್ವಹಣೆಯನ್ನು ಮಲ್ಪೆ ಮೀನುಗಾರರ ಸಂಘ ಇವರಿಗೆ ವಹಿಸುವುದು. ಈ ಎಲ್ಲಾ ಬೇಡಿಕೆಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿ ಮೀನುಗಾರರ ಹಿತದೃಷ್ಟಿಯಿಂದ ಆದ್ಯತೆಯಲ್ಲಿ ಈಡೇರಿಸುವಂತೆ ಮನವಿ ಮಾಡಿದರು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀಯುತ ಎಸ್. ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ಕಲ್ಪನಾ, ಅಪರ ಮುಖ್ಯ ಕಾರ್ಯದರ್ಶಿ ಮೀನುಗಾರಿಕೆ ಮತ್ತು ಪಶುಸಂಗೋಪನಾ ಇಲಾಖೆ, ಉಡುಪಿ, ದಕ್ಷಿಣಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಶಾಸಕರು, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಕೃಷ್ಣ ಸುವರ್ಣ, ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ಮೀನುಗಾರರ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಮೀನುಗಾರರ ಮುಖಂಡರಾದ ಸತೀಶ್ ಕುಂದರ್, ದಯಾನಂದ ಸುವರ್ಣ, ವಿಠಲ ಕರ್ಕೇರ, ಕರುಣಾಕರ ಸಾಲ್ಯಾನ್, ನಾಗರಾಜ ಕುಂದರ್, ಸುಭಾಷ್ ಮೆಂಡನ್, ಕಿಶೋರ್ ಸುವರ್ಣ, ಮಹೇಶ್ ಸುವರ್ಣ, ನಾರಾಯಣ ಕರ್ಕೇರ, ರವಿರಾಜ್ ಸುವರ್ಣ ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

06/02/2021 10:40 am

Cinque Terre

6.95 K

Cinque Terre

1

ಸಂಬಂಧಿತ ಸುದ್ದಿ