ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂಬೇಡ್ಕರ್‌ ರವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಡಾ ಮಾಧವಿ ಭಂಡಾರಿ

ಉಡುಪಿ:ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು ಎಂದು ಅಂಬೇಡ್ಕರ್ ಹೇಳಿದಂತೆ ಇತಿಹಾಸವನ್ನು ನೀವು ಸೃಷ್ಟಿಸಬೇಕಾದರೆ ನಿಮ್ಮ ಬದುಕಿನಲ್ಲಿ ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಚಿಂತನೆ ಮತ್ತು ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾಹಿತಿ ಡಾ. ಮಾಧವಿ ಭಂಡಾರಿ ಹೇಳಿದರು.

ಅವರು ಶನಿವಾರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ಡಾ.ಜಿ.ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಡುಪಿ ಸಹಯೋಗದಲ್ಲಿ ನಡೆದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಉದ್ಘಾಟಿಸಿ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಜಾತಿ ಪ್ರತಿಷ್ಠೆಗಳಿಲ್ಲದ ಅಸ್ಪೃಶ್ಯತೆಯ ತೊಡಕುಗಳಿಲ್ಲದ ಸಮತ ಭಾವದ ದೇಶವನ್ನು ಕಟ್ಟಬೇಕು. ಕೆಳವರ್ಗದವರಲ್ಲಿ ಮಾನವೀಯ ಘನತೆಯ ಸ್ವಾಭಿಮಾನವನ್ನು ಚಿಗುರಿಸುವುದು ಅಂಬೇಡ್ಕರವರ ಬದುಕಿನ ಧ್ಯೆಯವಾಗಿತ್ತು. ದಲಿತ ಜನಾಂಗದ ಬದುಕಿನ ಇತಿಹಾಸದಲ್ಲಿ ಅಸ್ಪಶ್ಯತೆಯನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಅದನ್ನು ಕೊನೆಗೊಳಿಸಬೇಕು ಎಂಬ ಹೋರಾಟಕ್ಕೆ ಇಳಿದ ಮೊಟ್ಟ ಮೊದಲ ವ್ಯಕ್ತಿ ಡಾ.ಬಿ.ಆರ್ ಅಂಬೇಡ್ಕರ್. ಅಸಮಾನತೆ ಮೇಲು ಕೀಳು ಮಾನವ ನಿರ್ಮಿತವಲ್ಲ. ಅದರಿಂದ ದಲಿತರಿಗೆ ಶಿಕ್ಷಣ ಕೊಡುವುದರ ಮೂಲಕ ಅವರನ್ನು ಮುಖ್ಯ ವಾಹಿನಿಗೆ ತರಬೇಕು ಶಿಕ್ಷಣದಿಂದ ವಂಚಿತರಾದರೆ ದಲಿತರು ಹಿಂದುಳಿಯಲು ಸಾಧ್ಯ. ಅವರನ್ನು ಸಬಲರನ್ನಾಗಿ ಮಾಡಿದರೆ ಅವರು ಹಿಂದುಳಿಯಲು ಸಾಧ್ಯವಿಲ್ಲ ಎಂದರು.

Edited By : Nirmala Aralikatti
Kshetra Samachara

Kshetra Samachara

07/02/2021 12:32 pm

Cinque Terre

4.66 K

Cinque Terre

1

ಸಂಬಂಧಿತ ಸುದ್ದಿ