ಉಡುಪಿ : ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರ ವಿದ್ಯಾರ್ಹತೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಅವರಲ್ಲಿ ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಇಚ್ಚಿಸುವವರನ್ನು, ಹೊರಗುತ್ತಿಗೆ ಮೂಲಕ ನೇಮಕ ಮಾಡುವ ಸಂದರ್ಭಗಳಲ್ಲಿ ಅವಕಾಶ ನೀಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುರ್ನವಸತಿ ಯೋಜನೆಯ ಫಲಾನುಭವಿಗಳ ಆಯ್ಕೆ, ದಮನಿತ ಮಹಿಳೆಯರ ಸಲಹಾ ಸಮಿತಿ ಹಾಗೂ ತರಬೇತಿ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಿಂಗತ್ವ ಅಲ್ಪ ಸಂಖ್ಯಾತರ ವಿದ್ಯಾರ್ಹತೆಗೆ ಅನುಗುಣವಾಗಿ, ಜಿಲ್ಲೆಯ ವಿವಿಧ ಕಚೇರಿಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳನ್ನು ಪಡೆಯುವ ಸಂದರ್ಭದಲ್ಲಿ ಅವರಿಗೆ ವಿಶೇಷ ಆದ್ಯತೆ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿ, ಅವರ ವಿದ್ಯಾರ್ಹತೆಯ ಕುರಿತ ಪಟ್ಟಿಯನ್ನು ಸಿದ್ದಪಡಿಸಿಕೊಳ್ಳುವಂತೆ ಹಾಗೂ ಸ್ವ-ಉದ್ಯೋಗ ಮಾಡಲು ಇಚ್ಛಿಸಿ, ಇದಕ್ಕಾಗಿ ತರಬೇತಿಯ ಅವಶ್ಯಕತೆಯ ಇರುವವವರಿಗೆ ಅಗತ್ಯ ತರಬೇತಿ ಪಡೆಯಲು ವ್ಯವಸ್ಥೆ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
Kshetra Samachara
07/02/2021 12:36 pm