ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: ಮಡಿಸಾಲು ನದಿ ಉಪ್ಪುನೀರು ತಡೆ ಅಣೆಕಟ್ಟು ನಿರ್ಮಾಣಕ್ಕೆ 35 ಕೋಟಿ ಅನುದಾನ

ಬ್ರಹ್ಮಾವರ: ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ತಾಲೂಕಿನ ಹೇರೂರು ಗ್ರಾಮದ ಮಡಿಸಾಲು ನದಿಗೆ ಸೇತುವೆ ಸಹಿತ ಉಪ್ಪುನೀರು ತಡೆ ಅಣೆಕಟ್ಟು ನಿರ್ಮಾಣಕ್ಕೆ 35 ಕೋಟಿ ರೂ. ಅನುದಾನ ಮಂಜೂರಾಗಿದೆ.

ಈ ಕಾಮಗಾರಿ ನಿರ್ವಹಿಸುವ ಭಾಗದಲ್ಲಿ ನದಿ ದಂಡೆ ಸಂರಕ್ಷಣೆ ಹಾಗೂ ಉಪ್ಪು ನೀರು ಸಮರ್ಪಕವಾಗಿ ತಡೆಯಲು ಕೆಲವೊಂದು ಭಾಗದಲ್ಲಿ ನದಿಯನ್ನು ಸೇರುವ ಸಣ್ಣ ಸಣ್ಣ ತೋಡುಗಳಿಗೆ ಕಿಂಡಿ ಅಣೆಕಟ್ಟು ಹಾಗೂ ನದಿಪಾತ್ರದಲ್ಲಿ ರಸ್ತೆ ನಿರ್ಮಿಸುವ ಸಂಬಂಧ ಸ್ಥಳೀಯರ ಬೇಡಿಕೆಯಂತೆ ಶಾಸಕ ರಘುಪತಿ ಭಟ್ ಅವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಬಳಿಕ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿ ನಡೆಯುವ ಸ್ಥಳವನ್ನು ಪರಿಶೀಲಿಸಿ ಸ್ಥಳೀಯರೊಂದಿಗೆ ಚರ್ಚಿಸಿ ಅವರ ಬೇಡಿಕೆಯಂತೆ ಸಮಗ್ರವಾಗಿ ಕಾಮಗಾರಿ ನಿರ್ವಹಿಸಲು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

Edited By : Nirmala Aralikatti
Kshetra Samachara

Kshetra Samachara

15/02/2021 07:58 pm

Cinque Terre

4.38 K

Cinque Terre

1

ಸಂಬಂಧಿತ ಸುದ್ದಿ