ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅರಣ್ಯ ಅಧಿಕಾರಿಗಳೊಂದಿಗೆ ಶಾಸಕರ ಸಭೆ

ಉಡುಪಿ:ಉಡುಪಿ ವಿಧಾನಸಭಾ ಕ್ಷೇತ್ರದ ಕಳ್ತೂರು, ಕೊಕ್ಕರ್ಣೆ, ಕರ್ಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಪಂಗಡ ಜನವಸತಿ ಪ್ರದೇಶಗಳ ಮೂಲಭೂತ ಸೌಕರ್ಯ ಕಲ್ಪಿಸುವ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯ ಅನುಮತಿಗಾಗಿ ಇಂದು ಅರಣ್ಯ ಅಧಿಕಾರಿಗಳೊಂದಿಗೆ ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಸಭೆ ನಡೆಸಿದ ಚರ್ಚಿಸಿದರು.

ಈ ಸಂದರ್ಭದಲ್ಲಿ ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಕ್ಷ್ಮಿ, ಕಳ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಕನ್ಯಾ, ಕೊಕ್ಕರ್ಣೆ ಗ್ರಾಮ ಪಂಚಾಯತ್ ಸದಸ್ಯರಾದ ವಸಂತ್ ಸೇರ್ವೆಗಾರ್, ವಸಂತ್ ಕುಮಾರ್, ಕಳ್ತೂರು ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್, ಜಿಲ್ಲಾ ರೈತ ಮೋರ್ಚಾ ಕಾರ್ಯಕಾರಣಿ ಕಾರ್ಯದರ್ಶಿಗಳಾದ ಆದರ್ಶ ಶೆಟ್ಟಿ, ಪಕ್ಷದ ಪ್ರಮುಖರಾದ ತಡಾಲ್ ಸುರೇಶ್ ಶೆಟ್ಟಿ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರಶಾಂತ್, ಹೆಬ್ರಿ ವಲಯ ಅರಣ್ಯಾಧಿಕಾರಿಗಳಾದ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

19/02/2021 04:57 pm

Cinque Terre

3.98 K

Cinque Terre

0

ಸಂಬಂಧಿತ ಸುದ್ದಿ