ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಅಜ್ಜರಕಾಡು ಭುಜಂಗ ಪಾರ್ಕ್ ಅಭಿವೃದ್ಧಿಗೆ ಶಾಸಕ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ಪ್ರವಾಸೋದ್ಯಮ ಇಲಾಖೆಯಿಂದ ಒಂದು ಕೋಟಿ ಹಾಗೂ ನಗರಸಭೆಯಿಂದ 35 ಲಕ್ಷ ರೂ ಮಂಜೂರಾಗಿದೆ. ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು, ಈ ಸಂಬಂಧ ಇಂದು ಶಾಸಕ ರಘುಪತಿ ಭಟ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ಸ್ಥಳೀಯ ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ನಗರಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಅಭಿಯಂತರರಾದ ದುರ್ಗಾ ಪ್ರಸಾದ್, ಕೆ.ಆರ್.ಐ.ಡಿ.ಎಲ್. ಕಾರ್ಯಪಾಲಕ ಅಭಿಯಂತರರಾದ ಹೆಬಸೂರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಭಾಕರ್, ಸಹಾಯಕ ಅಭಿಯಂತರರಾದ ಹೇಮಂತ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಕ್ಲಿಫರ್ಡ್ ಲೋಬೋ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
27/08/2021 06:19 pm