ಕೆಂಜೂರು: ಉಡುಪಿ ವಿಧಾನಸಭೆ ಕ್ಷೇತ್ರದ ಕಳ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಂಜೂರು ಗ್ರಾಮದ ಸಿರಿಮುಡಿ ಪಡುಮನೆ ಮುಖ್ಯ ರಸ್ತೆಯಿಂದ ಕೆಂಜೂರು ಮನೆ ರಸ್ತೆಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ಶಾಸಕ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ರೂ. 5 ಕೋಟಿ ಮಂಜೂರಾಗಿದೆ. ಇಂದು ಶಾಸಕ ಕೆ. ರಘುಪತಿ ಭಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಳ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷರಾದ ನವೀನ್ ಪೂಜಾರಿ ಗ್ರಾಮ ಪಂಚಾಯತ್ ಸದಸ್ಯರಾದ ಆದರ್ಶ ಶೆಟ್ಟಿ, ರಮಾನಂದ ಶೆಟ್ಟಿ, ದಿನೇಶ್ ಶೆಟ್ಟಿ, ಉಷಾ ಪೂಜಾರಿ, ನಾಗೇಶ್ ನಾಯ್ಕ್ ಹಾಗೂ ಸ್ಥಳೀಯರಾದ ನವನೀತ್ ಶೆಟ್ಟಿ, ಸತೀಶ್ ಶೆಟ್ಟಿ, ರಮಾನಂದ ಶೆಟ್ಟಿ, ಹರೀಶ್ ಶೆಟ್ಟಿ, ಅಮರ್ ಶೆಟ್ಟಿ, ವಾಸು ಪೂಜಾರಿ ಉಪಸ್ಥಿತರಿದ್ದರು.
Kshetra Samachara
01/01/2022 09:47 pm