ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿಟ್ಟೆ: ಪ್ರತಿ ದಿನ 10 ಟನ್ ಸಾಮರ್ಥ್ಯದ ಘನ ತ್ಯಾಜ್ಯ ನಿರ್ವಹಣಾ ಕೇಂದ್ರ ಏ.3 ಕ್ಕೆ ಕಾರ್ಯಾರಂಭ

ನಿಟ್ಟೆ: ಗ್ರಾಮೀಣ ಭಾರತದ, ಸಾರ್ವಜನಿಕ  ವಲಯದಲ್ಲಿ ಪ್ರತಿ ದಿನ 10 ಟನ್ ಸಾಮರ್ಥ್ಯದ ಘನ ತ್ಯಾಜ್ಯವನ್ನು ಆಧುನಿಕ ರೀತಿಯಲ್ಲಿ, ಪರಸರಕ್ಕೆ ಹಾನಿಯಾಗದಂತೆ, ಅತ್ಯಂತ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಏಕೈಕ ಸಮಗ್ರ ತ್ಯಾಜ್ಯ ನಿರ್ವಹಣಾ ಕೇಂದ್ರ (ಮೆಟಿರಿಯಲ್ಸ್ ರಿಕವರಿ ಫೆಸಿಲಿಟಿ ಸೆಂಟರ್- ಎಂಆರ್‌ಎಫ್ ಕೇಂದ್ರ) ಉಡುಪಿ ಜಿಲ್ಲಾ ಪಂಚಾಯತ್ ಅನುಷ್ಠಾನಗೊಳಿಸುತ್ತಿರುವ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಕಾರ್ಯಕ್ರಮದಡಿಯಲ್ಲಿ ಕಾರ್ಕಳ ತಾಲೂಕು ನಿಟ್ಟೆ ಗ್ರಾಪಂ ವ್ಯಾಪ್ತಿಯಲ್ಲಿ ಸಂಪೂರ್ಣ ಸಜ್ಜುಗೊಂಡಿದ್ದು, ಎಪ್ರಿಲ್ 3 ರಂದು ಉದ್ಘಾಟನೆಗೊಂಡು ಕಾರ್ಯಾರಂಭಿಸಲಿದೆ.

ಈ ಕೇಂದ್ರ ತ್ಯಾಜ್ಯದಿಂದ  ಸುಮಾರು  ಶೇ.90ಕ್ಕಿಂತಲೂ  ಅಧಿಕ ಸಂಪನ್ಮೂಲ ವನ್ನು ಪಡೆಯುವ ಸಾಮರ್ಥ್ಯವನ್ನು ಹೊಂದಿದೆ, ಕಡಿಮೆ ಮಾನವ ಸಂಪನ್ಮೂಲ ಸಹಾಯದಿಂದ ಪರಿಣಾಮಕಾರಿಯಾಗಿ ತ್ಯಾಜ್ಯ ನಿರ್ವಹಣೆ ಮಾಡುವ ಈ ಕೇಂದ್ರ ಅವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಪರಿಹಾರ ಒದಗಿಸಿ ಪರಿಸರ ಸಂರಕ್ಷಣೆ ಗೆ ಮಹತ್ತರವಾದ ಕೊಡುಗೆ ನೀಡಬಲ್ಲದು.

Edited By : PublicNext Desk
Kshetra Samachara

Kshetra Samachara

28/03/2022 09:18 pm

Cinque Terre

7.04 K

Cinque Terre

0

ಸಂಬಂಧಿತ ಸುದ್ದಿ