ಕಾರ್ಕಳ: ಗ್ರಾಮೀಣ ಭಾರತದ, ಸಾರ್ವಜನಿಕ ವಲಯದಲ್ಲಿ ಪ್ರತಿ ದಿನ 10 ಟನ್ ಸಾಮರ್ಥ್ಯದ ಘನ ತ್ಯಾಜ್ಯವನ್ನು ಆಧುನಿಕ ರೀತಿಯಲ್ಲಿ, ವಿಲೇವಾರಿ ಮಾಡುವ ಏಕೈಕ ಸಮಗ್ರ ತ್ಯಾಜ್ಯ ನಿರ್ವಹಣಾ ಕೇಂದ್ರ (ಮೆಟಿರಿಯಲ್ಸ್ ರಿಕವರಿ ಫೆಸಿಲಿಟಿ ಸೆಂಟರ್- ಎಂಆರ್‌ಎಫ್ ಕೇಂದ್ರ)ವನ್ನು ಇವತ್ತು ಸಚಿವ ಈಶ್ವರಪ್ಪ ಉದ್ಘಾಟಿಸಿದರು.
ಉಡುಪಿ ಜಿಲ್ಲಾ ಪಂಚಾಯತ್ ಅನುಷ್ಠಾನ ಗೊಳಿಸುತ್ತಿರುವ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಕಾರ್ಯಕ್ರಮದಡಿಯಲ್ಲಿ ಕಾರ್ಕಳ ತಾಲೂಕು ನಿಟ್ಟೆ ಗ್ರಾಪಂ ವ್ಯಾಪ್ತಿಯಲ್ಲಿ ಈ ಘಟಕ ಕಾರ್ಯಾರಂಭ ಮಾಡಲಿದೆ. ಕಾರ್ಯಕ್ರಮದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ,ಸಚಿವ ಸುನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
03/04/2022 06:14 pm