ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: 6.60 ಲಕ್ಷ ಹೆಕ್ಟೇರ್ ಭೂ ಪ್ರದೇಶ ಡೀಮ್ಡ್ ಪಾರೆಸ್ಟ್ ವ್ಯಾಪ್ತಿಯಿಂದ ಹೊರಕ್ಕೆ: ಉಮೇಶ್ ಕತ್ತಿ

ಬ್ರಹ್ಮಾವರ : ಡೀಮ್ಡ್ ಪಾರೆಸ್ಟ್ ವ್ಯಾಪ್ತಿಯಿಂದ ರಾಜ್ಯದ ಒಟ್ಟು 6.60 ಲಕ್ಷ ಹೆಕ್ಟೇರ್ ಭೂ ಪ್ರದೇಶವನ್ನು ಹೊರಗಿಟ್ಟು ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ರಾಜ್ಯದ ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿ ಬ್ರಹ್ಮಾವರದಲ್ಲಿ ಹೇಳಿದ್ದಾರೆ.

ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ 1995ರಲ್ಲಿ ರಾಜ್ಯದ ತಜ್ಞರ ಸಮಿತಿಯ ಮೂಲಕ ಒಟ್ಟು 9,94,881.11 ಹೆಕ್ಟೇರ್ ಪ್ರದೇಶವನ್ನು ಡೀಮ್ಡ್ ಫಾರೆಸ್ಟ್ ಎಂದು ಗುರುತಿಸಿದ್ದು, ಇದರಿಂದ ರಾಜ್ಯದ ಅದರಲ್ಲೂ ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗದ ರೈತರು ತೀವ್ರ ತೊಂದರೆ ಅನುಭವಿಸುತ್ತಾ ಬಂದಿದ್ದಾರೆ. ಸರಕಾರದ ಆದೇಶದಿಂದ ರೈತರ ಭೂಮಿ ಸಕ್ರಮಗೊಳ್ಳಲು ಸಾಧ್ಯ ಎಂದರು.

ರಾಜ್ಯದಲ್ಲಿ ಈ ಹಿಂದೆ ಗುರುತಿಸಲಾಗಿದ್ದ 9,94,881.11 ಹೆಕ್ಟೇರ್ ಡೀಮ್ಡ್ ಅರಣ್ಯ ಭೂಮಿಯಲ್ಲಿ 3.30 ಲಕ್ಷ ಹೆಕ್ಟೇರ್ ಭೂಮಿಯನ್ನು ಮಾತ್ರ ಅರಣ್ಯ ಇಲಾಖೆ ಸುಪರ್ದಿಗೆ ಒಪ್ಪಿಸಿದ್ದು, ಅದನ್ನು ಇಲಾಖೆಯ ವತಿಯಿಂದ ಸಂರಕ್ಷಿಸಿ ಅಭಿವೃದ್ಧಿಗೊಳಿಸಲಾಗುವುದು. ಉಳಿದ 6.60 ಲಕ್ಷ ಹೆಕ್ಟೇರ್ ಭೂಮಿಯನ್ನು ಕಂದಾಯ ಇಲಾಖೆಗೆ ನೀಡಲಾಗುವುದು ಎಂದು ಉಮೇಶ್ ಕತ್ತಿ ಹೇಳಿದರು.

Edited By : PublicNext Desk
Kshetra Samachara

Kshetra Samachara

07/05/2022 09:06 pm

Cinque Terre

1.38 K

Cinque Terre

0

ಸಂಬಂಧಿತ ಸುದ್ದಿ