ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ರಾಜ್ಯದಲ್ಲಿ 50 ಕೋಟಿ ವೆಚ್ಚದ ಐದು ದೀನ ದಯಾಳ್ ಉಪಾಧ್ಯಾಯ ವಿದ್ಯಾರ್ಥಿನಿಲಯ: ಸಚಿವ ಕೋಟ

ಉಡುಪಿ : ರಾಜ್ಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯದ ಕೊರತೆ ಉಂಟಾಗದಂತೆ ರಾಜ್ಯದ ವಿವಿಧ ಭಾಗಗಳಲ್ಲಿ 1000 ವಿದ್ಯಾರ್ಥಿಗಳ ಸಾಮರ್ಥ್ಯದ, ತಲಾ 50 ಕೋಟಿ ರೂ. ವೆಚ್ಚದಲ್ಲಿ ಐದು ದೀನ ದಯಾಳ್ ಉಪಾಧ್ಯಾಯ ವಿದ್ಯಾರ್ಥಿನಿಲಯಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಣಿಪಾಲದಲ್ಲಿ 4.24 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀಮತಿ ಇಂದಿರಾ ಗಾಂಧಿ ಮೆಟ್ರಿಕ್ ನಂತರದ ನರ್ಸಿಂಗ್ ವಿದ್ಯಾರ್ಥಿನಿ ನಿಲಯವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ, ಪ.ಜಾತಿ ಮತ್ತು ಪ.ವರ್ಗ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ವಿದ್ಯಾರ್ಥಿ ನಿಲಯದಲ್ಲಿ ವಸತಿ ಸೌಲಭ್ಯ ಒದಗಿಸಲು ದೀನ ದಯಾಳ್ ಉಪಾದ್ಯಾಯ ಹಾಸ್ಟೆಲ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ರಾಜ್ಯದ 5 ಕಡೆಗಳಲ್ಲಿ ಈ ಹಾಸ್ಟೆಲ್‌ಗಳ ನಿರ್ಮಾಣಕ್ಕೆ 250 ಕೋಟಿ ರೂ ವೆಚ್ಚವಾಗಲಿದೆ ಎಂದರು.

ವಿದ್ಯಾರ್ಥಿ ನಿಲಯಗಳಿಗೆ ಪ್ರತಿವರ್ಷ ಬೇಡಿಕೆ ಹೆಚ್ಚುತ್ತಿದ್ದು, ಈ ಬಾರಿ 3.5 ಕೋಟಿ ರೂ ವೆಚ್ಚದಲ್ಲಿ ರಾಜ್ಯದಲ್ಲಿ 50 ಕನಕದಾಸ ಹಾಸ್ಟೆಲ್‌ಗಳ ನಿರ್ಮಾಣ ಮಾಡಲಿದ್ದು, ಪ.ಜಾತಿ ಮತ್ತು ಪಂಗಡದವರಿಗಾಗಿ ಡಾ.ಬಿ.ಆರ್. ಅಂಬೇಡ್ಕರ್ ಹೆಸರಿನಲ್ಲಿ 100 ವಸತಿ ಶಾಲೆಗಳನ್ನು ನಿರ್ಮಾಣ ಮಾಡಲಾಗುವುದು. ಕರಾವಳಿ ಜಿಲ್ಲೆಗಳಲ್ಲಿ ನಾರಾಯಣಗುರುಗಳ ಹೆಸರಿನಲ್ಲಿ, ಉಡುಪಿ, ಉತ್ತರ ಕನ್ನಡ, ದ.ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 29 ಕೋಟಿ ರೂ ವೆಚ್ಚದಲ್ಲಿ ವಸತಿ ಶಾಲೆ ನಿರ್ಮಾಣ ಮಾಡಲಾಗುವುದು ಎಂದರು.

Edited By : PublicNext Desk
Kshetra Samachara

Kshetra Samachara

15/05/2022 02:36 pm

Cinque Terre

3.41 K

Cinque Terre

0

ಸಂಬಂಧಿತ ಸುದ್ದಿ