ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಳೆ ಹಾನಿ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆಯಲ್ಲಿ ಸಭೆ

ಉಡುಪಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಗಾಳಿ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಅನೇಕ ಮನೆಗಳಿಗೆ ಹಾನಿಯಾಗಿರುವುದಲ್ಲದೆ ಕೃಷಿಯೂ ಹಾನಿಗೊಳಗಾಗಿದೆ. ಈ ಸಂಬಂಧ ಪ್ರಾಕೃತಿಕ ವಿಕೋಪಕ್ಕೆ ತುರ್ತು ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಜಿಲ್ಲೆಯಾದ್ಯಂತ ಮಳೆಯಿಂದ ಹಾನಿಗೊಳಗಾದ ಬೆಳೆಯ ಬಗ್ಗೆ ಮಾಹಿತಿ ಪಡೆದು ಪರಿಹಾರ ಕಲ್ಪಿಸುವ ಬಗ್ಗೆ ಚರ್ಚಿಸಲಾಯಿತು. ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ತಿಳಿಸಿ ತೋಡುಗಳ ಹೂಳೆತ್ತುವುದರ ಜೊತೆಗೆ ಕಡಲ್ಕೊರೆತ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು.

ಈ ಸಭೆಯಲ್ಲಿ ಶಾಸಕ ರಘುಪತಿ ಭಟ್ ,ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.‌

Edited By : PublicNext Desk
Kshetra Samachara

Kshetra Samachara

11/07/2022 04:39 pm

Cinque Terre

1.64 K

Cinque Terre

1

ಸಂಬಂಧಿತ ಸುದ್ದಿ