ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಪ್ರಾಕೃತಿಕ ವಿಕೋಪ :ಇಂದು ಕರಾವಳಿ ಜಿಲ್ಲೆಗಳ ಸಚಿವರು, ಅಧಿಕಾರಿಗಳ ಸಭೆ ನಡೆಸಲಿರುವ ಸಿಎಂ

ಉಡುಪಿ: ಜಿಲ್ಲೆಯಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಮಾಡಲಿರುವ ಸಿಎಂ ಬಸವರಾಜ ಬೊಮ್ಮಾಯಿ ನಿನ್ನೆ ರಾತ್ರಿಯೇ ಉಡುಪಿಗೆ ಆಗಮಿಸಿದ್ದಾರೆ.ರಾತ್ರಿ ಮಣಿಪಾಲದ ಕಂಟ್ರಿ ಇನ್ ಹೋಟೆಲ್ ನಲ್ಲಿ ಸಿಎಂ ವಾಸ್ತವ್ಯ ಹೂಡಿದರು.

ಇಂದು ( ಜು.13) ಬೆಳಿಗ್ಗೆ ಹತ್ತು ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಮುಚ್ಚಯದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.ಬಳಿಕ ಕರಾವಳಿಯ ಮೂರೂ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ನಡೆಸಲಿದ್ದಾರೆ.12.30 ಕ್ಕೆ ಕೃಷ್ಣಮಠ ಭೇಟಿ ಕಾರ್ಯಕ್ರಮ ನಿಗದಿಯಾಗಿದ್ದು ಬಳಿಕ ಜಿಲ್ಲೆಯ ಆಯ್ದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಆಯೋಜನೆಗೊಂಡಿದೆ.

Edited By : PublicNext Desk
Kshetra Samachara

Kshetra Samachara

13/07/2022 08:21 am

Cinque Terre

1.36 K

Cinque Terre

0

ಸಂಬಂಧಿತ ಸುದ್ದಿ