ಉಡುಪಿ: ಉಡುಪಿ ಜಿಲ್ಲೆಯ ಹಿರ್ಗಾನ ಗ್ರಾಪಂನಲ್ಲಿ ನಡೆಯಬೇಕಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ರದ್ದುಗೊಂಡಿದೆ ಎಂದು ಕಾರ್ಕಳ ತಹಸೀಲ್ದಾರ್ ಪ್ರದೀಪ್ ಕುರುಡೇಕರ್ ತಿಳಿಸಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದರಿಂದ ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂತ್ರಸ್ತರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ, ಪರಿಹಾರ ವಿತರಿಸುವ ಹಾಗೂ ನಷ್ಟ ಅಂದಾಜಿಸುವ ಕಾರ್ಯದಲ್ಲಿ ಜಿಲ್ಲಾಡಳಿತ ಕಾರ್ಯಪ್ರವೃತ್ತವಾಗಬೇಕಿದೆ. ಈ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಲು ತೊಂದರೆಯಾಗುತ್ತಿರುವುದರಿಂದ ಹೆಚ್ಚು ಮಳೆಯಾಗುತ್ತಿರುವ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಬೆಳಗಾವಿ ಸಹಿತ ಹಲವು ಜಿಲ್ಲೆಗಳಲ್ಲಿ ಜು.16ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅಭಿಯಾನಕ್ಕೆ ಜುಲೈ ತಿಂಗಳಿನಲ್ಲಿ ವಿನಾಯಿತಿ ನೀಡಲಾಗಿದೆ.
Kshetra Samachara
16/07/2022 10:47 am