ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ನಿರಾಶ್ರಿತರು,ವಲಸೆ ಕಾರ್ಮಿಕರಿಗೆ ಸೂರು ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ

ಮಣಿಪಾಲ: ನಿರಾಶ್ರಿತರಿಗೆ ನಿವೇಶನ/ಖಾಲಿ ಜಾಗ ಮತ್ತು ಮನೆ ಮಂಜೂರು ಮಾಡುವಂತೆ ಆಗ್ರಹಿಸಿ ಇವತ್ತು ಪ್ರತಿಭಟನೆ ನಡೆಯಿತು.ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಲೆನಾಡು ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಮುಖ್ಯವಾಗಿ ಕೂಲಿ ಕೆಲಸ ಮಾಡಿಕೊಂಡು, ಗುಡಿಸಲು, ಬಾಡಿಗೆ ಮನೆ ಮಾಡಿಕೊಂಡು ಜೀವನ ನಡೆಸುತ್ತಿರುತ್ತಿರುವ ಕೂಲಿ ಕಾರ್ಮಿಕರು ಹಲವು ವರ್ಷಗಳಿಂದ ಇಲ್ಲಿ ವಾಸ ಮಾಡುತ್ತಿದ್ದಾರೆ. ಇವರು ಹಲವಾರು ವರ್ಷಗಳಿಂದ ಸೂರಿಗಾಗಿ ಪ್ರಯತ್ನ ಪಡುತ್ತಿದ್ದರೂ ಯಾವುದೇ ರೀತಿಯ ಪ್ರಯೋಜವಾಗಿಲ್ಲ.

ಈ ನಿರಾಶ್ರಿತ ಪಟ್ಟಿಯಲ್ಲಿರುವವರಿಗೆ ನಿವೇಶನ/ಖಾಲಿ ಜಾಗ ಮತ್ತು ಮನೆ ತಕ್ಷಣ ಮಂಜೂರು ಮಾಡಬೇಕು ಎಂದು ಕರುನಾಡು ಹಿತರಕ್ಷಣಾ ಸಮಿತಿ ಆಗ್ರಹಿಸಿದೆ. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ಸಲ್ಲಿಸಲಾಯಿತು.

Edited By : Manjunath H D
Kshetra Samachara

Kshetra Samachara

25/07/2022 04:35 pm

Cinque Terre

2.17 K

Cinque Terre

0

ಸಂಬಂಧಿತ ಸುದ್ದಿ