ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯ ನಿಟ್ಟೂರು ವಾರ್ಡಿನಲ್ಲಿ ಸಮಗ್ರ ಘನತ್ಯಾಜ್ಯ ನಿರ್ವಹಣಾ ವ್ಯವಸ್ಥೆಯಲ್ಲಿ "ಘನತ್ಯಾಜ್ಯ ನಿರ್ವಹಣಾ ವಾಹನ ನಿಲುಗಡೆ ಘಟಕ" ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ರೂ. 49.80 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಇಂದು ಶಾಸಕ ಕೆ. ರಘುಪತಿ ಭಟ್ ಘಟಕವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಸ್ಥಳೀಯ ನಗರಸಭಾ ಸದಸ್ಯರಾದ ಸಂತೋಷ್ ಜತ್ತನ್ ಹಾಗೂ ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್ ಪ್ರಭು, ಅಭಿಯಂತರರಾದ ದುರ್ಗಾಪ್ರಸಾದ್, ನಗರ ಸಭೆಯ ಪರಿಸರ ಇಲಾಖೆ ಅಧಿಕಾರಿಗಳಾದ ಸ್ನೇಹಾ ಹಾಗೂ ವಿವಿಧ ವಾರ್ಡಿನ ನಗರಸಭಾ ಸದಸ್ಯರು ಉಪಸ್ಥಿತರಿದ್ದರು.
Kshetra Samachara
25/07/2022 06:40 pm