ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: 6.50 ಕೋಟಿ ವೆಚ್ಚದ ಬಾಲಕಿಯರ ವಿದ್ಯಾರ್ಥಿ ನಿಲಯದ ಕಾಮಗಾರಿಗೆ ಸಚಿವ ಕೋಟ ಶಂಕುಸ್ಥಾಪನೆ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ವತಿಯಿಂದ ಉಡುಪಿ ತಾಲೂಕಿನ 76 ಬಡಗಬೆಟ್ಟು ಗ್ರಾಮದಲ್ಲಿ ರೂ 6.50 ಕೋಟಿ ವೆಚ್ಚದಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಉಡುಪಿ ಟೌನ್ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನೆ ಇಂದು ನೆರವೇರಿತು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಶಾಸಕರಾದ ಕೆ. ರಘುಪತಿ ಭಟ್ ಭಾಗವಹಿಸಿ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಳೀಯ ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್, ಉಡುಪಿ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್, ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇದರ ಪ್ರಾಂಶುಪಾಲರಾದ ಭಾಸ್ಕರ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/07/2022 06:45 pm

Cinque Terre

6.3 K

Cinque Terre

0

ಸಂಬಂಧಿತ ಸುದ್ದಿ